ಬೆಂಗಳೂರು: ‘ಮುಂದಿನ ವರ್ಷದ ಮಾರ್ಚ್‌ಗೆ ಐದು ವರ್ಷಗಳ ಅಧಿಕಾರದ ಅವಧಿ ಮುಕ್ತಾಯವಾಗುವ ಕಾರಣ ಚುನಾವಣೆ ನಡೆಸುವಂತೆ ಸರ್ಕಾರಕ್ಕೆ ಮೂರು ತಿಂಗಳ ಮೊದಲು ಪತ್ರ ಬರೆಯುತ್ತೇನೆ’ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ (ಕಸಾಪ) ಅಧ್ಯಕ್ಷ ಮನು ಬಳಿಗಾರ ತಿಳಿಸಿದ್ದಾರೆ.
ಅಧ್ಯಕ್ಷರ ಚುನಾವಣೆಗೆ ಇದ್ದ ಕಾನೂನು ತೊಡಕು ನಿವಾರಣೆಯಾದ ಬೆನ್ನಲ್ಲಿಯೇ, ಪರಿಷತ್ತಿನ ಚುನಾವಣೆಗೆ ಹಾಲಿ ಕಾರ್ಯಕಾರಿ ಸಮಿತಿ ಅವಕಾಶ ಮಾಡಿಕೊಡಬೇಕು ಎಂದು ಸಾಹಿತಿಗಳು ಹಾಗೂ ಚಿಂತಕರು ಆಗ್ರಹಿಸಿದ್ದರು.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮನು ಬಳಿಗಾರ, ‘2021ರ ಮಾರ್ಚ್ 3ಕ್ಕೆ ನಮ್ಮ ಕಾರ್ಯಕಾರಿ ಸಮಿತಿಯ ಅಧಿಕಾರದ ಅವಧಿ ಮುಕ್ತಾಯವಾಗಲಿದೆ. ನಿಬಂಧನೆಯ ಪ್ರಕಾರ ಮುಂದಿನ ಕಾರ್ಯಕಾರಿ ಸಮಿತಿ ಅಸ್ತಿತ್ವಕ್ಕೆ ಬರುವವರೆಗೂ ಈಗಿನ ಕಾರ್ಯಕಾರಿ ಸಮಿತಿಯೇ ಮುಂದುವರಿಯಲಿದೆ. ಅವಧಿ ಮುಗಿಯುವ ಮೂರು ತಿಂಗಳ ಮೊದಲು ಸರ್ಕಾರಕ್ಕೆ ಚುನಾವಣೆ ನಡೆಸುವ ಸಂಬಂಧ ಪತ್ರ ಬರೆಯಬೇಕು. ಅದರ ಅನುಸಾರ ಡಿಸೆಂಬರ್ 3ಕ್ಕಿಂತ ಮೊದಲು ಸರ್ಕಾರಕ್ಕೆ ಪತ್ರ ಬರೆಯುತ್ತೇನೆ’ ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.