ADVERTISEMENT

ಕನ್ನಡ ಸಾಹಿತ್ಯ ಪರಿಷತ್ತು: ಪರೀಕ್ಷೆಗಳಿಗೆ ಅರ್ಜಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 15 ಜುಲೈ 2025, 23:35 IST
Last Updated 15 ಜುಲೈ 2025, 23:35 IST
<div class="paragraphs"><p>ಕಡತ</p></div>

ಕಡತ

   

(ಸಾಂದರ್ಭಿಕ ಚಿತ್ರ)

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು 2025-26ನೇ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ ಹಾಗೂ ರತ್ನ ಪರೀಕ್ಷೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ.

ADVERTISEMENT

2025ರ ಡಿಸೆಂಬರ್ ಕೊನೆಯ ವಾರದಲ್ಲಿ ನಡೆಯುವ ಈ ಪರೀಕ್ಷೆಗಳಿಗೆ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 15 ಕೊನೆಯ ದಿನ. ₹50 ದಂಡ ಶುಲ್ಕದೊಂದಿಗೆ ಸೆ.30 ರವರೆಗೆ ಅರ್ಜಿ ಸಲ್ಲಿಸಬಹುದು. ಪರಿಷತ್ತಿನ ಮಾರಾಟ ಮಳಿಗೆಯಲ್ಲಿ ₹25 ಪಾವತಿಸಿ, ಪರೀಕ್ಷಾ ನಿಯಮಾವಳಿ ಹಾಗೂ ಅರ್ಜಿ ನಮೂನೆಯನ್ನು ಜುಲೈ 16ರಿಂದ ಪಡೆಯಬಹುದು. ಪರಿಷತ್ತಿನ ಹೆಸರಿಗೆ ₹65 ಮನಿಯಾರ್ಡರ್ ಮಾಡಿದರೆ ಅರ್ಜಿ ನಮೂನೆಯನ್ನು ಅಂಚೆ ಮೂಲಕ ಕಳುಹಿಸಲಾಗುತ್ತದೆ.

ಪರೀಕ್ಷಾ ಅರ್ಜಿಗಳನ್ನು ಅಂತರ್ಜಾಲ ತಾಣ www.kasapa.in ಮೂಲಕವೂ ಪಡೆದುಕೊಳ್ಳಬಹುದು. ಪರೀಕ್ಷಾ ಶುಲ್ಕದೊಂದಿಗೆ ₹25 ಅರ್ಜಿ ಶುಲ್ಕವನ್ನು ಪ್ರತ್ಯೇಕವಾಗಿ ಪಾವತಿಸಬೇಕು ಎಂದು ಪರಿಷತ್ತಿನ ಅಧ್ಯಕ್ಷ ಮಹೇಶ ಜೋಶಿ ತಿಳಿಸಿದ್ದಾರೆ. ಸಂಪರ್ಕಕ್ಕೆ: 080 26612991 ಅಥವಾ 224238567

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.