ಬೆಂಗಳೂರು: ಮುಂಬರುವ86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿವಿಶೇಷ ಅತಿಥಿಯಾಗಿ ಭಾಗವಹಿಸುವಂತೆಕೆನಡಾ ಸಂಸತ್ತಿನಲ್ಲಿ ಕನ್ನಡ ಭಾಷಣ ಮಾಡಿದಚಂದ್ರ ಆರ್ಯ ಅವರಿಗೆ ಕನ್ನಡ ಸಾಹಿತ್ಯ ಪರಿಷತ್ತಿನ (ಕಸಾಪ) ಅಧ್ಯಕ್ಷ ಮಹೇಶ ಜೋಶಿ ಅವರು ಮನವಿ ಮಾಡಿದ್ದಾರೆ.
‘ಹಾವೇರಿಯಲ್ಲಿ ಸಾಹಿತ್ಯ ಸಮ್ಮೇಳನದ ಸಿದ್ಧತೆ ಕೈಗೊಳ್ಳಲಾಗಿದೆ. 3 ದಿನಗಳ ನುಡಿಜಾತ್ರೆಯ ಮೊದಲ ದಿನತಾವು ವಿಶೇಷ ಅಥಿತಿಯಾಗಿ ಭಾಗವಹಿಸಿ, ಸಮಾರಂಭದ ಘನತೆ ಹೆಚ್ಚಿಸಬೇಕು’ ಎಂದು ಪತ್ರದಲ್ಲಿ ಕೋರಿದ್ದಾರೆ.‘ಕೆನಡಾದಲ್ಲಿ ತಮ್ಮ ಮಾರ್ಗದರ್ಶನದಲ್ಲಿ ಪರಿಷತ್ತಿನ ಘಟಕ ಸ್ಥಾಪಿಸಲು ಉತ್ಸುಕರಾಗಿದ್ದೇವೆ’ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.