ADVERTISEMENT

ಬೆಂಗಳೂರು: ಸೀಮಾ ರಾಣಿಗೆ ಕಸಾಪ ದತ್ತಿ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 5 ಮಾರ್ಚ್ 2025, 16:05 IST
Last Updated 5 ಮಾರ್ಚ್ 2025, 16:05 IST
ಡಾ.ಸೀಮಾ ರಾಣಿ
ಡಾ.ಸೀಮಾ ರಾಣಿ   

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ನೀಡುವ ‘ಡಾ.ಎಚ್.ಕೆ.ಮರಿಯಪ್ಪ ದತ್ತಿ ಪ್ರಶಸ್ತಿ’ಗೆ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞೆ ಡಾ.ಸೀಮಾ ರಾಣಿ ಆಯ್ಕೆಯಾಗಿದ್ದಾರೆ.

ವೈದ್ಯಕೀಯ ಕ್ಷೇತ್ರಕ್ಕೆ ನೀಡಿದ ಕೊಡುಗೆಯನ್ನು ಪರಿಗಣಿಸಿ ಕಸಾಪ ಅಧ್ಯಕ್ಷ ಮಹೇಶ ಜೋಶಿ ನೇತೃತ್ವದ ಸಮಿತಿ ಈ ಆಯ್ಕೆ ಮಾಡಿದೆ. ವೈದ್ಯಕೀಯ ಮತ್ತು ಸಾಮಾಜಿಕ ಕ್ಷೇತ್ರಕ್ಕೆ ಮಹತ್ವದ ಕೊಡುಗೆ ನೀಡಿದ ಡಾ.ಎಚ್.ಕೆ.ಮರಿಯಪ್ಪ ಅವರು ಪರಿಷತ್ತಿನಲ್ಲಿ ಈ ದತ್ತಿ ಸ್ಥಾಪಿಸಿದ್ದಾರೆ.

ಡಾ.ಸೀಮಾ ರಾಣಿ ಅವರು ಸಾಮಾಜಿಕ ಸೇವೆಯನ್ನೂ ಕೈಗೊಂಡಿದ್ದು, ಕೋವಿಡ್ ಸಂದರ್ಭದಲ್ಲಿ ಅವರು ಸಲ್ಲಿಸಿದ ಸಾಮಾಜಿಕ ಸೇವೆಯನ್ನು ಈ ಆಯ್ಕೆಗೆ ಪರಿಗಣಿಸಲಾಗಿದೆ. ಇದೇ 13 ರಂದು ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.