ADVERTISEMENT

ಸಂವಿಧಾನದ ಮಹತ್ವ ತಿಳಿಸಬೇಕು: ಮಹೇಶ ಜೋಶಿ

​ಪ್ರಜಾವಾಣಿ ವಾರ್ತೆ
Published 26 ಜನವರಿ 2024, 14:08 IST
Last Updated 26 ಜನವರಿ 2024, 14:08 IST
<div class="paragraphs"><p>ಮಹೇಶ ಜೋಶಿ</p></div>

ಮಹೇಶ ಜೋಶಿ

   

ಬೆಂಗಳೂರು: ‘ದೇಶದಲ್ಲಿರುವ ಬಹುತೇಕರಿಗೆ ಭಾರತ ಸಂವಿಧಾನದ ಪ್ರಮುಖ ಲಕ್ಷಣಗಳು ಮತ್ತು ಅದರ ಮಹತ್ವ ತಿಳಿದಿಲ್ಲ. ಆದ್ದರಿಂದ ಸಂವಿಧಾನದ ಮಹತ್ವವನ್ನು ಎಲ್ಲರಿಗೂ ತಿಳಿಸುವ ಕೆಲಸವಾಗಬೇಕು’ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ (ಕಸಾಪ) ಅಧ್ಯಕ್ಷ ಮಹೇಶ ಜೋಶಿ ತಿಳಿಸಿದರು. 

ಕಸಾಪ ನಗರದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ 75ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ADVERTISEMENT

‘ನಮ್ಮ ದೇಶದಲ್ಲಿ ಸ್ವಾತಂತ್ರ್ಯೋತ್ಸವ ಮತ್ತು ಗಣರಾಜ್ಯೋತ್ಸವಗಳೆರಡೂ ಸುವರ್ಣಾಕ್ಷರಗಳಲ್ಲಿ ಬರೆದಿಡಬೇಕಾದ ದಿನಗಳಾಗಿವೆ. ಸಮೀಕ್ಷೆಯೊಂದರ ಪ್ರಕಾರ ದೇಶದ ಒಟ್ಟು ಜನಸಂಖ್ಯೆಯಲ್ಲಿ ಶೇ 2ರಷ್ಟು ಜನರು ಮಾತ್ರ ಗಣರಾಜ್ಯೋತ್ಸವಕ್ಕಿಂತ ಮುಂಚೆ ಹುಟ್ಟಿದವರಾಗಿದ್ದಾರೆ. ಇದರಿಂದಾಗಿ ಹೆಚ್ಚಿನ ಜನರಿಗೆ ಸಂವಿಧಾನದ ಮಹತ್ವ ತಿಳಿದಿಲ್ಲ. ದೇಶದ ಆಡಳಿತವು ಸಂವಿಧಾನಕ್ಕೆ ತಕ್ಕಂತೆಯೇ ಇರಬೇಕೆಂದು ಕೇಶವಾನಂದ ಭಾರತಿ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್ ಹೇಳಿದೆ’ ಎಂದರು. 

ಪರಿಷತ್ತಿನ ಕಾರ್ಯದರ್ಶಿಗಳಾದ ಪದ್ಮಿನಿ ನಾಗರಾಜು, ನೇ.ಭ.ರಾಮಲಿಂಗಶೆಟ್ಟಿ ಹಾಗೂ ಕೋಶಾಧ್ಯಕ್ಷ ಬಿ.ಎಂ.ಪಟೇಲ್ ಪಾಂಡು ಪಾಲ್ಗೊಂಡಿದ್ದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.