ಬೆಂಗಳೂರು: ‘ಕನ್ನಡ ಸಾಹಿತ್ಯ ಪರಿಷತ್ತಿನ (ಕಸಾಪ) ಆಡಳಿತ ಪಾರದರ್ಶಕವಾಗಿದೆ. ದಾಖಲೆಗಳು ನಿಖರವಾಗಿದ್ದು, ಯಾವುದೇ ರೀತಿಯ ತನಿಖೆಗೆ ಸದಾ ಸಿದ್ದ’ ಎಂದು ಕಸಾಪ ಅಧ್ಯಕ್ಷ ಮಹೇಶ ಜೋಶಿ ತಿಳಿಸಿದ್ದಾರೆ.
‘ಹೈಕೋರ್ಟ್ ಆದೇಶದಂತೆ ಇದೇ 5 ರಂದು ವಾರ್ಷಿಕ ಸಾಮಾನ್ಯ ಸಭೆ ನಡೆಸಿ, ಅಲ್ಲಿ ಕಾನೂನಾತ್ಮಕ ನಿರ್ಣಯಗಳನ್ನು ತೆಗೆದುಕೊಳ್ಳಲಾಗುತ್ತದೆ. ಈ ಬಗ್ಗೆ ವರದಿಯನ್ನು ಇದೇ 14ರಂದು ಹೈಕೋರ್ಟ್‌ಗೆ ಸಲ್ಲಿಸಲಾಗುತ್ತದೆ. ಅಲ್ಲಿಯವರೆಗೆ ಸರ್ಕಾರವು ಕಸಾಪ ಅಧ್ಯಕ್ಷರ ವಿರುದ್ಧ ಕ್ರಮ ತೆಗೆದುಕೊಳ್ಳದೆ, ತನ್ನ ನಿಲುವನ್ನು ವರದಿಯ ಮೂಲಕ ತಿಳಿಸಬೇಕೆಂದು ಕೋರ್ಟ್ ನಿರ್ದೇಶಿಸಿದೆ. ಈ ನಡುವೆ ಕಸಾಪ ವಿರುದ್ಧ ಉದ್ದೇಶ ಪೂರ್ವಕವಾಗಿ ತಪ್ಪು ಮಾಹಿತಿಗಳನ್ನು ಹರಿಬಿಡಲಾಗುತ್ತಿದೆ’ ಎಂದು ಹೇಳಿದ್ದಾರೆ.
‘ತನಿಖೆಗಳ ಮೂಲಕ ಕನ್ನಡ ಸಾಹಿತ್ಯ ಪರಿಷತ್ತಿನ ನಿಲುವು ಇನ್ನಷ್ಟು ಸ್ಪಷ್ಟವಾಗಲಿದ್ದು. ಕಳಂಕರಹಿತವಾಗಿ ಹೊರ ಬರಲು ಇದೊಂದು ಸದಾವಕಾಶವೆಂದು ಭಾವಿಸಿ ಮುನ್ನಡೆಯಲಾಗುತ್ತದೆ’ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.