ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ನೀಡುವ ‘ಪಾಂಡಪ್ಪ ಲಕ್ಷ್ಮಣ ಹೂಗಾರ ದತ್ತಿ ಪ್ರಶಸ್ತಿ’ಗೆ ಬೀದರ್‌ನ ಅನ್ನಪೂರ್ಣ ತಾಯಿ ಮತ್ತು ಬೆಳಗಾವಿಯ ವಿನೋದ ಸುರೇಂದ್ರ ಆಯ್ಕೆಯಾಗಿದ್ದಾರೆ.
ಕಸಾಪ ಅಧ್ಯಕ್ಷ ಮಹೇಶ ಜೋಶಿ ನೇತೃತ್ವದ ಸಮಿತಿ ಈ ಆಯ್ಕೆ ಮಾಡಿದೆ. ಅನ್ನಪೂರ್ಣ ತಾಯಿ ಅವರು ಕನ್ನಡದಲ್ಲಿ ಸ್ನಾತಕೋತ್ತರ ಪದವಿ ಮತ್ತು ಕಾನೂನು ವಿಷಯದಲ್ಲಿ ಪದವಿ ಪಡೆದಿದ್ದಾರೆ. ಬಸವ ತತ್ವ ಪ್ರಸಾರಕ್ಕೆ ಅವರು ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಬೆಳಗಾವಿಯ ಭರತೇಶ ಎಜುಕೇಷನ್ ಟ್ರಸ್ಟ್‌ನ ಕಾರ್ಯದರ್ಶಿಯಾದ ವಿನೋದ ಸುರೇಂದ್ರ, ಸಂಶೋಧನಾ ವಿಜ್ಞಾನಿಯಾಗಿದ್ದಾರೆ. ಶಿಕ್ಷಣ ಮತ್ತು ಸಾಮಾಜಿಕ ಸೇವಾ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಪರಿಷತ್ತಿನ ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.