ಬೆಂಗಳೂರು: ಕನ್ನಡ ಸಂಘರ್ಷ ಸಮಿತಿ ನೀಡುವ ‘ಕನ್ನಡ ಕಟ್ಟಾಳು’ ಪ್ರಶಸ್ತಿಗೆ ಕನ್ನಡ ಪರ ಹೋರಾಟಗಾರ ಮಹೇಶ್ ಊಗಿನಹಳ್ಳಿ ಹಾಗೂ ‘ನಿಸ್ಸೀಮ ಕನ್ನಡತಿ’ ಪ್ರಶಸ್ತಿಗೆ ಕನ್ನಡ ಕಾರ್ಯಕರ್ತೆ ಎಂ.ಬಿ.ವಿಜಯಲಕ್ಷ್ಮಿ ಆಯ್ಕೆಯಾಗಿದ್ದಾರೆ.
ಪ್ರಶಸ್ತಿ ಸ್ಮರಣಿಕೆ ಹಾಗೂ ತಲಾ ₹ 11 ಸಾವಿರ ನಗದು ಒಳಗೊಂಡಿದೆ. ನ.10ರಂದು ನಗರದಲ್ಲಿ ನಡೆಯುವ ಸಮಿತಿಯ ಸಂಸ್ಥಾಪನಾ ದಿನ ಕಾರ್ಯಕ್ರಮದಲ್ಲಿ ಸಾಹಿತಿ ಹಂ.ಪ. ನಾಗರಾಜಯ್ಯ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ವೀರಭದ್ರ ಚನ್ನಮಲ್ಲ ದೇಶಿಕೇಂದ್ರ ಸ್ವಾಮೀಜಿ ಉದ್ಘಾಟಿಸಲಿದ್ದು, ಜಯಲಕ್ಷ್ಮಿ ಪಾಟೀಲ ಸ್ಮರಣ ಸಂಚಿಕೆ ಬಿಡುಗಡೆ ಮಾಡುವರು. ರಾಮಣ್ಣ ಎಚ್.ಕೋಡಿಹೊಸಹಳ್ಳಿ ಅಧ್ಯಕ್ಷತೆ ವಹಿಸುವರು ಎಂದು ಸಮಿತಿಯ ಅಧ್ಯಕ್ಷ ಎ.ಎಸ್.ನಾಗರಾಜಸ್ವಾಮಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.