ADVERTISEMENT

ಕನ್ನಮಂಗಲ ಗ್ರಾ.ಪಂ ಅಧ್ಯಕ್ಷರ ಪದಚ್ಯುತಿ

​ಪ್ರಜಾವಾಣಿ ವಾರ್ತೆ
Published 16 ಡಿಸೆಂಬರ್ 2025, 16:08 IST
Last Updated 16 ಡಿಸೆಂಬರ್ 2025, 16:08 IST
ಅವಿಶ್ವಾಸ ನಿರ್ಣಯದ ಪರ ಮತ ಚಲಾಯಿಸಿದ ಕನ್ನಮಂಗಲ ಗ್ರಾಮ ಪಂಚಾಯಿತಿ ಸದಸ್ಯರು 
ಅವಿಶ್ವಾಸ ನಿರ್ಣಯದ ಪರ ಮತ ಚಲಾಯಿಸಿದ ಕನ್ನಮಂಗಲ ಗ್ರಾಮ ಪಂಚಾಯಿತಿ ಸದಸ್ಯರು    

ಕೆ.ಆರ್.ಪುರ: ಪೂರ್ವ ತಾಲ್ಲೂಕಿನ ಕನ್ನಮಂಗಲ ಗ್ರಾಮ ಪಂಚಾಯಿತಿ ಅಧ್ಯಕ್ಷರನ್ನು ಪದಚ್ಯುತಿಗೊಳಿಸಲಾಗಿದೆ.

ಗ್ರಾಮ ಪಂಚಾಯಿತಿ ಸದಸ್ಯರು ಮಂಡಿಸಿದ್ದ ಅವಿಶ್ವಾಸ ಗೊತ್ತುವಳಿಗೆ, 16 ಸದಸ್ಯರ ಪೈಕಿ 12 ಸದಸ್ಯರ ಮತಗಳು ಬಂದವು. ಉಪ ವಿಭಾಗಾಧಿಕಾರಿ ಕಿರಣ್ ನೇತೃತ್ವದಲ್ಲಿ ಅವಿಶ್ವಾಸ ಗೊತ್ತುವಳಿ ಸಭೆ ಮಂಗಳವಾರ ನಡೆಯಿತು.

ಅಧ್ಯಕ್ಷೆ ಪವಿತ್ರಾ ರವಿ ಸೇರಿ ನಾಲ್ಕು ಸದಸ್ಯರು ಸಭೆಗೆ ಗೈರಾಗಿದ್ದರು. ಅವಿಶ್ವಾಸ ನಿರ್ಣಯದಿಂದ ಅಧ್ಯಕ್ಷರು ಸ್ಥಾನದಿಂದ ಪದಚ್ಯುತಗೊಂಡಿದ್ದಾರೆ. ನೂತನ ಅಧ್ಯಕ್ಷರ ಆಯ್ಕೆಗೆ ಸದ್ಯದಲ್ಲೇ ದಿನಾಂಕ ನಿಗದಿಪಡಿಸುವುದಾಗಿ ಉಪ ವಿಭಾಗಾಧಿಕಾರಿ ತಿಳಿಸಿದರು.

ADVERTISEMENT

‘ಪವಿತ್ರಾ ರವಿ ಅವರು ಅಭಿವೃದ್ಧಿ ಕಾರ್ಯಗಳಿಗೆ ಸ್ಪಂದಿಸುತ್ತಿಲ್ಲ. ಸದಸ್ಯರನ್ನು ಪರಿಗಣಿಸದೆ
ಹಿಟ್ಲರ್ ರೀತಿಯಲ್ಲಿ ವರ್ತಿಸುತ್ತಿದ್ದರು. ಇದ್ದರಿಂದ ಬೇಸತ್ತು ಅವರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲಾಗಿತ್ತು’ ಎಂದು ಸದಸ್ಯ ಯಲ್ಲಪ್ಪ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.