ಬೆಂಗಳೂರು: ಕನ್ನಡ ಸಂಘರ್ಷ ಸಮಿತಿ ನೀಡುವ 2025ನೇ ಸಾಲಿನ ‘ಡಾ. ಅನುಪಮಾ ನಿರಂಜನ ಪ್ರಶಸ್ತಿ’ಗೆ ಕ್ಯಾನ್ಸರ್ ತಜ್ಞೆ ಡಾ. ವಿಜಯಲಕ್ಷ್ಮಿ ದೇಶಮಾನೆ ಹಾಗೂ ‘ಡಾ.ಕೋ.ವೆಂ.ರಾ. ಕನ್ನಡ ಪರಿಚಾರಕ ಪ್ರಶಸ್ತಿ’ಗೆ ಕನ್ನಡ ಪರ ಕಾರ್ಯಕರ್ತ ಸುರೇಶ್ ಕೆ. ಆಯ್ಕೆಯಾಗಿದ್ದಾರೆ.
ಪ್ರಶಸ್ತಿಯು ತಲಾ ₹5 ಸಾವಿರ ನಗದು ಒಳಗೊಂಡಿದೆ. ಇದೇ 15ರಂದು ಎನ್.ಆರ್. ಕಾಲೊನಿಯಲ್ಲಿರುವ ಬಿ.ಎಂ.ಶ್ರೀ. ಕಲಾಭವನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.
ಲೇಖಕಿ ಡಾ. ವಸುಂಧರಾ ಭೂಪತಿ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಪತ್ರಕರ್ತ ರಾಮಣ್ಣ ಎಚ್. ಕೋಡಿಹೊಸಹಳ್ಳಿ ಅವರು ಅಧ್ಯಕ್ಷತೆ ವಹಿಸುತ್ತಾರೆ. ವಿಮರ್ಶಕ ಎಚ್. ದಂಡಪ್ಪ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸುತ್ತಾರೆ ಎಂದು ಸಮಿತಿಯ ಅಧ್ಯಕ್ಷ ಎ.ಎಸ್. ನಾಗರಾಜಸ್ವಾಮಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.