ಬೆಂಗಳೂರು:ನಗರದ ಉದ್ಯಮಿ ಕಪಾಲಿ ಮೋಹನ್ ಅವರು ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪೀಣ್ಯ ಬಸವೇಶ್ವರ ನಿಲ್ದಾಣದ ಸುಪ್ರೀಂ ಹೋಟೆಲ್ ನಲ್ಲಿ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ. ಸುಪ್ರೀಂ ಹೋಟೆಲ್ ಕಪಾಲಿ ಮೋಹನ್ ಅವರದ್ದೇ ಆಗಿತ್ತು.
ಈ ಹಿಂದೆ ಸಿಸಿಬಿ ಪೊಲೀಅರು ಕಪಾಲಿ ಮೋಹನ್ ಮನೆ ಮೇಲೆ ರೇಡ್ ಮಾಡಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಗಂಗಮ್ಮನಗುಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.