ADVERTISEMENT

ವೈಟ್‌ಟಾಪಿಂಗ್ ಯೋಜನೆ ₹800 ಕೋಟಿ ವೆಚ್ಚಕ್ಕೆ ಅಸ್ತು

​ಪ್ರಜಾವಾಣಿ ವಾರ್ತೆ
Published 6 ಜನವರಿ 2024, 0:09 IST
Last Updated 6 ಜನವರಿ 2024, 0:09 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಬೆಂಗಳೂರು: ನಗರದಲ್ಲಿ ₹800 ಕೋಟಿ ವೆಚ್ಚದಲ್ಲಿ ರಸ್ತೆಗಳ ವೈಟ್‌ಟಾಪಿಂಗ್‌ ಕ್ರಿಯಾಯೋಜನೆಗೆ ಸಚಿವ ಸಂಪುಟ ಶುಕ್ರವಾರ ಅನುಮೋದನೆ ನೀಡಿದೆ.

ನಗರದ ರಸ್ತೆಗಳಲ್ಲಿ ಪದೇಪದೇ ದುರಸ್ತಿ ಮರುಕಳಿಸದಂತೆ ಯೋಜನೆ ರೂಪಿಸಲಾಗಿದ್ದು, ಮುಖ್ಯರಸ್ತೆ ಮತ್ತು ಉಪ ಮುಖ್ಯರಸ್ತೆಗಳಲ್ಲಿ ವೈಟ್‌ಟಾಪಿಂಗ್‌ ಮಾಡುವ  43 ಕಾಮಗಾರಿಗಳಿಗೆ ಅನುಮೋದನೆ ನೀಡಲಾಗಿದೆ ಎಂದು ಸಚಿವ ಎಚ್.ಕೆ. ಪಾಟೀಲ್‌ ಮಾಹಿತಿ ನೀಡಿದರು. ಒಟ್ಟು 1,345 ಕಿ.ಮೀ ಉದ್ದದ ಮುಖ್ಯರಸ್ತೆ ಮತ್ತು ಉಪ ಮುಖ್ಯ ರಸ್ತೆಗಳಲ್ಲಿದ್ದು, ಇದರಲ್ಲಿ 145 ಕಿ.ಮೀ ರಸ್ತೆಯನ್ನು ಈಗಾಗಲೇ ವೈಟ್‌ಟಾಪಿಂಗ್‌ ಮಾಡಲಾಗಿದೆ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.