ADVERTISEMENT

ಕರಾವಳಿ ಸಿರಿ ಪ್ರಶಸ್ತಿ ಪ್ರದಾನ

​ಪ್ರಜಾವಾಣಿ ವಾರ್ತೆ
Published 28 ಸೆಪ್ಟೆಂಬರ್ 2019, 20:15 IST
Last Updated 28 ಸೆಪ್ಟೆಂಬರ್ 2019, 20:15 IST
ಕೆ. ರತ್ನಪ್ರಭಾ ಮತ್ತು ಡಾ.ಎಂ.ಮೋಹನ್ ಆಳ್ವ ಅವರಿಗೆ ಡಿ.ವಿ ಸದಾನಂದ ಗೌಡ (ಬಲದಿಂದ ಎರಡನೆಯವರು) ‘ಕರಾವಳಿ ಸಿರಿ’ ಪ್ರಶಸ್ತಿ ನೀಡಿ ಗೌರವಿಸಿದರು. (ಎಡದಿಂದ) ವೇದಿಕೆ ಅಧ್ಯಕ್ಷ ರವಿರಾಜ್ ಎಸ್. ಶೆಟ್ಟಿ, ಗೌರವ ಕಾರ್ಯದರ್ಶಿ ಡಾ.ಅರುಣ್ ಕುಮಾರ್ ಶೆಟ್ಟಿ, ಕೋಟ ಶ್ರೀನಿವಾಸ ಪೂಜಾರಿ, ವೇದಿಕೆ ಉಪಾಧ್ಯಕ್ಷ ಎಸ್. ರಾಘವೇಂದ್ರ ಅಲ್ಸೇ, ತುಳು ಕೂಟದ ಅಧ್ಯಕ್ಷ ದಿನೇಶ್ ಹೆಗ್ಡೆ ಮತ್ತು ಲೋಕಾಯುಕ್ತ ನ್ಯಾಯಮೂರ್ತಿ ಪಿ.ವಿಶ್ವನಾಥ ಶೆಟ್ಟಿ ಇದ್ದರು –ಪ್ರಜಾವಾಣಿ ಚಿತ್ರ

ಬೆಂಗಳೂರು:ಕನ್ನಡ ಕರಾವಳಿ ವೇದಿಕೆ ವತಿಯಿಂದ ಆಳ್ವಾಸ್‌ ಎಜುಕೇಶನ್‌ ಫೌಂಡೇಷನ್‌ ಮುಖ್ಯಸ್ಥ ಡಾ.ಎಂ. ಮೋಹನ್‌ ಆಳ್ವ ಹಾಗೂ ನಿವೃತ್ತ ಐಎಎಸ್‌ ಅಧಿಕಾರಿ ಕೆ.ರತ್ನಪ್ರಭಾ ಅವರಿಗೆ ‘ಕರಾವಳಿ ಸಿರಿ’ ಪ್ರಶಸ್ತಿ ಪ್ರದಾನ ಮಾಡಲಾಯಿತು.

‘ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಶನಿವಾರ ಮಾತನಾಡಿದ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ, ‘ಸಮಾಜದಲ್ಲಿ ಉತ್ತಮ ಕೆಲಸ ಹಾಗೂ ಸಾಧನೆ ಮಾಡಿದವರಿಗೆ ಇಂತಹ ಗೌರವ ಸನ್ಮಾನಗಳು ಸಲ್ಲಬೇಕು’ ಎಂದರು.

ಸಚಿವ ಕೋಟ ಶ್ರೀನಿವಾಸ ಪೂಜಾರಿ, ‘ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ ಸಂಸ್ಕೃತಿಯನ್ನು ಉಳಿಸಿ, ಬೆಳೆಸುವ ನಿಟ್ಟಿನಲ್ಲಿಕನ್ನಡ ಕರಾವಳಿ ವೇದಿಕೆ ಸಂಸ್ಥೆ ಶ್ರಮಿಸುತ್ತಿದೆ’ ಎಂದು ಶ್ಲಾಘಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.