ADVERTISEMENT

ಪೊಲೀಸರಿಗೆ ಶರಣಾಗಲು ತೀರ್ಮಾನ

​ಪ್ರಜಾವಾಣಿ ವಾರ್ತೆ
Published 8 ನವೆಂಬರ್ 2019, 10:39 IST
Last Updated 8 ನವೆಂಬರ್ 2019, 10:39 IST
   

ಬೆಂಗಳೂರು: ಮಿಂಟೊ ಆಸ್ಪತ್ರೆ ವೈದ್ಯರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ವಿ.ವಿ.ಪುರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಆರೋಪಿಗಳಾಗಿರುವ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಎದುರು ಗುರುವಾರ ಶರಣಾಗಲಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ ಕರವೇ ಅಧ್ಯಕ್ಷ ಟಿ.ಎ. ನಾರಾಯಣಗೌಡ, ‘ಕಾರ್ಯಕರ್ತರು ಯಾರ ಮೇಲೆಯೂ ಹಲ್ಲೆ ಮಾಡಿಲ್ಲ. ಅಷ್ಟಾದರೂ ವೈದ್ಯರು ಪ್ರತಿಭಟನೆ ಮಾಡುತ್ತಿದ್ದಾರೆ. ಗುರುವಾರವೂ ಒಳರೋಗಿಗಳ ವಿಭಾಗ ಬಂದ್ ಮಾಡುವುದಾಗಿ ಹೇಳಿದ್ದಾರೆ. ಹೀಗಾಗಿ, ನಮ್ಮ ಕಾರ್ಯಕರ್ತರು ಪೊಲೀಸರಿಗೆ ಶರಣಾಗಲು ನಿರ್ಧರಿಸಿದ್ದಾರೆ’ ಎಂದರು.

‘ಅಶ್ವಿನಿ ಗೌಡ, ಮನು ಗೌಡ ಹಾಗೂ ಇತರ ಕಾರ್ಯಕರ್ತರು ಕಮಿಷನರ್‌ ಎದುರು ಶರಣಾಗಲಿದ್ದಾರೆ ಎಂದು ಅವರು ಒತ್ತಾಯಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.