ADVERTISEMENT

ಕಾರ್ಮಿಕರ ಕಲ್ಯಾಣ ಮಂಡಳಿಯ184 ಹುದ್ದೆಗಳ ಭರ್ತಿಗೆ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

​ಪ್ರಜಾವಾಣಿ ವಾರ್ತೆ
Published 5 ಫೆಬ್ರುವರಿ 2025, 20:26 IST
Last Updated 5 ಫೆಬ್ರುವರಿ 2025, 20:26 IST
   

ಬೆಂಗಳೂರು: ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವಿವಿಧ ವೃಂದಗಳ 184 ಹುದ್ದೆಗಳ ಭರ್ತಿಗೆ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಫೆಬ್ರುವರಿ 6ರಂದು ಪ್ರಕಟಿಸಲಾಗುತ್ತದೆ.

ಕಲ್ಯಾಣ ಅಧಿಕಾರಿಗಳು, ಕ್ಷೇತ್ರ ನಿರೀಕ್ಷಕರು, ಪ್ರಥಮ ದರ್ಜೆ ಸಹಾಯಕರು ಮತ್ತು ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿ ಪರೀಕ್ಷೆ ಪ್ರಕ್ರಿಯೆ ಮುಗಿದಿದೆ. ಈ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಮಂಡಳಿಯ ವೆಬ್‌ಸೈಟ್‌ನಲ್ಲಿ https://karbwwb.karnataka.gov.in ಮತ್ತು ಸೂಚನಾ ಫಲಕದಲ್ಲಿ ಪ್ರಕಟಿಸಲಾಗುವುದು ಎಂದು ಮಂಡಳಿಯ ಜಂಟಿ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪಟ್ಟಿಯ ಬಗ್ಗೆ ಆಕ್ಷೇಪಣೆಗಳಿದ್ದರೆ ಅಭ್ಯರ್ಥಿಗಳು ಫೆ. 21ರ ಸಂಜೆ 5.30ರರೊಳಗೆ ಜಂಟಿ ಕಾರ್ಯದರ್ಶಿ ಹಾಗೂ ಸದಸ್ಯ ಕಾರ್ಯದರ್ಶಿ ಅವರಿಗೆ ಸಲ್ಲಿಸಬಹುದು ಎಂದು ತಿಳಿಸಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.