
ಬೆಂಗಳೂರು: ಗ್ರೇಟರ್ ಬೆಂಗಳೂರು ವ್ಯಾಪ್ತಿಯ ಐದು ನಗರ ಪಾಲಿಕೆಗಳ ವರದಿಯನ್ನು ರಾಜ್ಯದ 5ನೇ ಹಣಕಾಸು ಆಯೋಗ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗುರುವಾರ ಸಲ್ಲಿಸಿತು.
ಆಯೋಗದ ಅಧ್ಯಕ್ಷ ಸಿ. ನಾರಾಯಣಸ್ವಾಮಿ ಅವರ ನೇತೃತ್ವದಲ್ಲಿ ಸದಸ್ಯರು ವರದಿ ಪುಸ್ತಕವನ್ನು ಮುಖ್ಯಮಂತ್ರಿಯವರಿಗೆ ನೀಡಿದರು.
ಐದು ನಗರ ಪಾಲಿಕೆಗಳ ಕಚೇರಿಯಲ್ಲಿ ಸಭೆಗಳನ್ನು ನಡೆಸಿದ್ದ ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರು, ಪಾಲಿಕೆಗಳಿಂದ ಬೇಡಿಕೆಗಳನ್ನು ಸ್ವೀಕರಿಸಿದ್ದರು. ರಸ್ತೆ, ಚರಂಡಿ, ಪಾದಚಾರಿ ಮಾರ್ಗ, ಶೌಚಾಲಯ, ಗ್ರಂಥಾಲಯ ಸೇರಿದಂತೆ ಸೇರಿದಂತೆ ಮೂಲ ಸೌಕರ್ಯಕ್ಕೆ ಸಾವಿರಾರು ಕೋಟಿ ಅಗತ್ಯವಿದ್ದು, ಸುಮಾರು ₹9 ಸಾವಿರ ಕೋಟಿ ಅನುದಾನ ಒದಗಿಸುವಂತೆ ಕೋರಿವೆ.
ಹಣಕಾಸು ಆಯೋಗದ ವರದಿಯ ಆಧಾರದಲ್ಲಿ ನಗರ ಪಾಲಿಕೆಗಳಿಗೆ ರಾಜ್ಯ ಬಜೆಟ್‌ನಲ್ಲಿ ಅನುದಾನ ಪ್ರಕಟವಾಗುವ ನಿರೀಕ್ಷೆ ಇದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.