ADVERTISEMENT

ಬೆಂಗಳೂರು: ಕರವೇ ಕಾರ್ಯಕರ್ತರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 5 ಡಿಸೆಂಬರ್ 2020, 6:13 IST
Last Updated 5 ಡಿಸೆಂಬರ್ 2020, 6:13 IST
ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.   

ಬೆಂಗಳೂರು: ನಗರದ ಪ್ರಮುಖ ರಸ್ತೆಗಳಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.

ಕರವೇ ಗಾಂಧಿ ನಗರ ಕಚೇರಿಯಿಂದ ಕರವೇ ಅಧ್ಯಕ್ಷ ನಾರಾಯಣಗೌಡ ನೇತೃತ್ವದಲ್ಲಿ ಮೆರವಣಿಗೆಯಲ್ಲಿ ಬಂದ ಕಾರ್ಯಕರ್ತರನ್ನು ಕಾಂಗ್ರೆಸ್‌ನ ಹಳೆಯ ಕಚೇರಿ ಬಳಿ ತಡೆದ ಪೊಲೀಸರು ವಶಕ್ಕೆ ತೆಗೆದುಕೊಂಡರು.

ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಮರಾಠ ಅಭಿವೃದ್ಧಿ ನಿಗಮ ರಚನೆ ನಿರ್ಧಾರ ವಾಪಸ್ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.