ADVERTISEMENT

ಕರ್ನಾಟಕ ಬಂದ್: ರಾಜಾಜಿನಗರ ಮೆಟ್ರೊ ನಿಲ್ದಾಣಕ್ಕೆ ಮುತ್ತಿಗೆ ಯತ್ನ

​ಪ್ರಜಾವಾಣಿ ವಾರ್ತೆ
Published 22 ಮಾರ್ಚ್ 2025, 4:55 IST
Last Updated 22 ಮಾರ್ಚ್ 2025, 4:55 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಬೆಂಗಳೂರು: ಬೆಳಗಾವಿಯಲ್ಲಿ ಮರಾಠಿಗರ ಪುಂಡಾಟಿಕೆ ಖಂಡಿಸಿ ಕೆರೆ ನೀಡಿರುವ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ರಾಜಾಜಿನಗರ ಮೆಟ್ರೊ ನಿಲ್ದಾಣಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಕನ್ನಡಪರ ಸಂಘಟನೆಗಳ ಹೋರಾಟಗಾರರನ್ನು ಪೂಲೀಸರು ವಶಕ್ಕೆ ಪಡೆದರು.

'ಮರಾಠಿಗರು, ಎಂಇಎಸ್ ಸಂಘಟನೆಯ ಕುರಿತು ಕನ್ನಡಿಗರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಮೆಜೆಸ್ಟಿಕ್, ಬಸವೇಶ್ವರನಗರ, ಕೆ.ಆರ್.ಪುರ, ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆ ಮಾಡುತ್ತಿರುವ ಕನ್ನಡಪರ ಹೋರಾಟಗಾರರನ್ನು ಪೊಲೀಸರು ಬಂಧನ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರ ಪ್ರತಿಭಟನೆ ಹತ್ತಿಕ್ಕುತ್ತಿರುವುದು ಸರಿಯಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬಂದ್‌ಗೆ ಅವಕಾಶ ನೀಡುತ್ತಿಲ್ಲ' ಎಂದು ಹೋರಾಟಗಾರರು ಆರೋಪಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.