ಬೆಂಗಳೂರು: ಬೆಂಗಳೂರಿನ ನಾಲ್ಕು ವಿಧಾನಸಭಾ ಕ್ಷೇತ್ರಗಳಿಗೆ ಗುರುವಾರ (ಡಿ.5) ಉಪಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಹೈಕೋರ್ಟ್ ಪ್ರಧಾನ ಪೀಠ ಹಾಗೂ ಬೆಂಗಳೂರಿನ ಅಧೀನ ನ್ಯಾಯಾಲಯಗಳಿಗೆ ರಜೆ ಘೋಷಿಸಲಾಗಿದೆ.
‘ಮೆಯೋಹಾಲ್ ಮತ್ತು ಕೌಟುಂಬಿಕ ನ್ಯಾಯಾಲಯ ಹೊರತುಪಡಿಸಿದಂತೆ ಹೈಕೋರ್ಟ್, ಸಿಟಿ ಸಿವಿಲ್ ಕೋರ್ಟ್, ಲಘು ವ್ಯಾಜ್ಯಗಳ ನ್ಯಾಯಾಲಯ ಮತ್ತು ಎಲ್ಲ ಅಧೀನ ನ್ಯಾಯಾಲಯಗಳಿಗೆ ರಜೆ ಘೋಷಿಸಲಾಗಿದೆ’ ಎಂದು ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ರಾಜೇಂದ್ರ ಬದಾಮಿಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
‘ಒಂದು ವೇಳೆ ಮೆಯೋಹಾಲ್ ಮತ್ತು ಕೌಟುಂಬಿಕ ನ್ಯಾಯಾಲಯ ವ್ಯಾಪ್ತಿಯ ವಕೀಲರು ಕೋರ್ಟ್‌ಗೆ ಹಾಜರಾಗದೇ ಇದ್ದರೆ ಅವರ ಪ್ರಕರಣಗಳಿಗೆ ಯಾವುದೇ ತೊಂದರೆ ಉಂಟಾಗದಂತೆ ನೋಡಿಕೊಳ್ಳಬೇಕು ಎಂದು ರಿಜಿಸ್ಟ್ರಾರ್ ಜನರಲ್ ಅವರಿಗೆ ಮನವಿ ಮಾಡಲಾಗಿದೆ’ ಎಂದು ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ಎ.ಪಿ.ರಂಗನಾಥ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.