ADVERTISEMENT

ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಶಮನಗೊಳಿಸಿ: ನಿಡುಮಾಮಿಡಿ ಸ್ವಾಮೀಜಿ ಆಗ್ರಹ

​ಪ್ರಜಾವಾಣಿ ವಾರ್ತೆ
Published 7 ಆಗಸ್ಟ್ 2021, 7:03 IST
Last Updated 7 ಆಗಸ್ಟ್ 2021, 7:03 IST
ವೀರಭದ್ರ ಚನ್ನಮಲ್ಲ ಸ್ವಾಮೀಜಿ
ವೀರಭದ್ರ ಚನ್ನಮಲ್ಲ ಸ್ವಾಮೀಜಿ   

ಬೆಂಗಳೂರು: ‘ಮುಂದಿನ ದಿನಗಳಲ್ಲಿ ರಾಜ್ಯ ಬಿಜೆಪಿ ಘಟಕದಲ್ಲಿ ಆಂತರಿಕ ಭಿನ್ನಮತ ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ಇದನ್ನು ಶಮನಗೊಳಿಸಲು ಪಕ್ಷದ ವರಿಷ್ಠರು ಮುಂದಾಗಬೇಕು’ ಎಂದು ನಿಡುಮಾಮಿಡಿ ಮಠದ ವೀರಭದ್ರ ಚನ್ನಮಲ್ಲ ಸ್ವಾಮೀಜಿ ಆಗ್ರಹಿಸಿದರು.

ಇಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಆಂತರಿಕ ಭಿನ್ನಮತ ಎಂಬುದು ಸೆರಗಿನಲ್ಲಿ ಬೆಂಕಿಯನ್ನು ಕಟ್ಟಿಕೊಂಡಂತೆ. ಇದು ಉಲ್ಬಣಗೊಂಡರೆ ಮುಖ್ಯಮಂತ್ರಿ ದುರ್ಬಲಗೊಳ್ಳುತ್ತಾರೆ . ಸರ್ಕಾರ ಕೂಡ ದುರ್ಬಲಗೊಳ್ಳುತ್ತದೆ. ಇದರಿಂದ ಆಡಳಿತದಲ್ಲಿ ಶಿಥಿಲತೆ ಕಾಣಿಸಿಕೊಂಡು ಜನಹಿತ ಕಾರ್ಯಗಳಿಗೆ ಅಡಚಣೆ ಎದುರಾಗುತ್ತದೆ. ಭಿನ್ನಮತ ಎಂಬುದು ಒಟ್ಟು ಜನಮಾನಸದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ಅದ್ದರಿಂದ ಭಿನ್ನಮತ ಮತ್ತೆ ಪುನರಾವರ್ತನೆ ಆಗದ ಹಾಗೆ ವರಿಷ್ಠರು ಆರಂಭದಲ್ಲಿ ಶಮನ ಗೊಳಿಸುವುದಕ್ಕೆ ಕಾಳಜಿ ವಹಿಸಬೇಕಾಗಿದೆ’ ಎಂದರು.

‘ಸಚಿವ ಸಂಪುಟದಲ್ಲಿ ಭರ್ತಿಯಾಗದಿರುವ ಮೂರು ಸ್ಥಾನಗಳಿಗೆ ಪ್ರಾತಿನಿಧ್ಯವಿಲ್ಲದ ಹಾಗೂ ಕಡಿಮೆ ಪ್ರಾತಿನಿಧ್ಯವಿರುವ ಸಮುದಾಯಗಳಿಗೆ ಅವಕಾಶ ಕಲ್ಪಿಸಬೇಕಾಗಿದೆ. ಕೇಂದ್ರದಲ್ಲಿ ಹಾಗು ರಾಜ್ಯದಲ್ಲಿ ಒಂದೇ ಪಕ್ಷದ ಸರ್ಕಾರವಿದೆ. ನ್ಯಾಯಯುತವಾಗಿ ಬರಬೇಕಾದ ಪ್ರವಾಹದ ಪರಿಹಾರ ಹಾಗೂ ಜಿಎಸ್ ಟಿ ಪಾಲನ್ನು ನೀಡುವುದರ ಮೂಲಕ ಕೇಂದ್ರ ಸರ್ಕಾರ ಕರ್ನಾಟಕದ ಜನತೆಯ ಸಂಕಷ್ಟ ನಿವಾರಣೆಗೆ ಸ್ಪಂದಿಸಬೇಕು’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.