ADVERTISEMENT

ರಾಜ್ಯದಲ್ಲಿ ಕುಸಿದ ತಾಪಮಾನ: ಥರಗುಟ್ಟಿಸುತ್ತಿದೆ ಚಳಿ

​ಪ್ರಜಾವಾಣಿ ವಾರ್ತೆ
Published 7 ಜನವರಿ 2026, 23:30 IST
Last Updated 7 ಜನವರಿ 2026, 23:30 IST
   

ಬೆಂಗಳೂರು: ಶೀತ ಗಾಳಿ ಹಾಗೂ ಮೋಡ ಕವಿದ ವಾತಾವರಣದಿಂದ ರಾಜ್ಯದ ವಿವಿಧೆಡೆ ತಾಪಮಾನ ಕುಸಿಯುತ್ತಿದ್ದು, ಮುಂದಿನ ಐದು ದಿನಗಳಲ್ಲಿ ಕನಿಷ್ಠ ಉಷ್ಣಾಂಶವು 2ರಿಂದ 3 ಡಿಗ್ರಿ ಸೆಲ್ಸಿಯಸ್ ಇಳಿಕೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಂದಿನ ಎರಡು ದಿನ ಬೀದರ್, ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ ಮತ್ತು ಗದಗ ಜಿಲ್ಲೆಯಲ್ಲಿ ಶೀತಗಾಳಿ ಬೀಸುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರುವ ಸಂಭವವಿದ್ದು, ಮುಂಜಾನೆ ಮಂಜು ಕವಿಯುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.

ಬುಧವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಹಿಂದಿನ 24 ಗಂಟೆಗಳ ಅವಧಿಯಲ್ಲಿ ರಾಜ್ಯದ ವಿವಿಧೆಡೆ ಕನಿಷ್ಠ ಉಷ್ಣಾಂಶವು ಸಾಮಾನ್ಯಕ್ಕಿಂತ 2ರಿಂದ 3 ಡಿಗ್ರಿ ಸೆಲ್ಸಿಯಸ್ ಇಳಿಕೆಯಾಗಿತ್ತು.

ADVERTISEMENT

ಬೀದರ್‌ನಲ್ಲಿ ಕನಿಷ್ಠ ಉಷ್ಣಾಂಶವು 2.1 ಡಿಗ್ರಿ ಸೆಲ್ಸಿಯಸ್‌ನಷ್ಟು ಕುಸಿತವಾಗಿ, 9.5 ಡಿಗ್ರಿ ಸೆಲ್ಸಿಯಸ್‌ ವರದಿಯಾಗಿತ್ತು. ಧಾರವಾಡದಲ್ಲಿ ಕನಿಷ್ಠ ಉಷ್ಣಾಂಶ 9.8 ಡಿಗ್ರಿ ಸೆಲ್ಸಿಯಸ್‌ಗೆ ಇಳಿಕೆಯಾಗಿತ್ತು. ಕರಾವಳಿ ಹೊರತುಪಡಿಸಿ ಉತ್ತರ ಹಾಗೂ ದಕ್ಷಿಣ ಒಳನಾಡಿನ ವಿವಿಧೆಡೆ ಉಷ್ಣಾಂಶ ಕುಸಿತವಾಗಿತ್ತು ಎಂದು ಇಲಾಖೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.