ADVERTISEMENT

ಪದಾಧಿಕಾರಿಗಳ ಪಟ್ಟಿ ಶೀಘ್ರ: ವರಿಷ್ಠರೊಂದಿಗೆ ಡಿ.ಕೆ. ಶಿವಕುಮಾರ್‌ ಚರ್ಚೆ

​ಪ್ರಜಾವಾಣಿ ವಾರ್ತೆ
Published 2 ಆಗಸ್ಟ್ 2021, 23:50 IST
Last Updated 2 ಆಗಸ್ಟ್ 2021, 23:50 IST
ಡಿ.ಕೆ.ಶಿವಕುಮಾರ್‌
ಡಿ.ಕೆ.ಶಿವಕುಮಾರ್‌   

ಬೆಂಗಳೂರು: ಕೆಪಿಸಿಸಿ ಮುಂಚೂಣಿ ಘಟಕಗಳ ಪುನರ್‌ರಚನೆ ಮತ್ತು ನೂತನ ಪದಾಧಿಕಾರಿಗಳ ಪಟ್ಟಿ ಅಂತಿಮ
ಗೊಳಿಸುವ ಕುರಿತು ಪಕ್ಷದ ವರಿಷ್ಠರ ಜೊತೆ ಕಾಂಗ್ರೆಸ್‌ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬುಧವಾರ ದೆಹಲಿಯಲ್ಲಿ ಸಮಾಲೋಚನೆ ನಡೆಸಲಿದ್ದಾರೆ.

ಪಕ್ಷದ ನಾಯಕ ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‌ ಮತ್ತು ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಅವರನ್ನು ಭೇಟಿ ಮಾಡಲಿರುವ ಶಿವಕುಮಾರ್‌, ಕೆಪಿಸಿಸಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡುವ ಕುರಿತು ಮಹತ್ವದ ಚರ್ಚೆ ನಡೆಸಲಿದ್ದಾರೆ. ಆಗಸ್ಟ್‌ 10ರ ಒಳಗೆ ಪಟ್ಟಿ ಅಂತಿಮಗೊಳ್ಳುವ ಸಾಧ್ಯತೆ ಇದೆ ಎಂದು ಕಾಂಗ್ರೆಸ್‌ ಮೂಲಗಳು ಹೇಳಿವೆ.

ವಿಶೇಷ ವಿಮಾನದಲ್ಲಿ ಮಂಗಳ ವಾರ ಬೆಳಿಗ್ಗೆ ಜೈಪುರಕ್ಕೆ ತೆರಳಲಿರುವ ಶಿವಕುಮಾರ್‌, ರಾಜಸ್ಥಾನದ ಮುಖ್ಯ ಮಂತ್ರಿ ಅಶೋಕ್ ಗೆಹಲೋತ್‌ ಅವರನ್ನು ಭೇಟಿ ಮಾಡಲಿದ್ದಾರೆ. ಕಾಂಗ್ರೆಸ್‌ ಆಡಳಿತದ ರಾಜಸ್ಥಾನದಲ್ಲಿ ಮುಖ್ಯಮಂತ್ರಿ ಮತ್ತು ಪಕ್ಷದ ಯುವ ನಾಯಕ ಸಚಿನ್ ಪೈಲಟ್ ನಡುವೆ ಅಂತರ ಹೆಚ್ಚಿ, ಪಕ್ಷ ಇಬ್ಭಾಗವಾಗುವ ಹಂತ ತಲುಪಿದಾಗ ರಾಷ್ಟ್ರೀಯ ನಾಯಕರ ಮಧ್ಯಸ್ಥಿಕೆಯಲ್ಲಿ ಸಮಸ್ಯೆ ಬಗೆ ಹರಿದಿತ್ತು. ಇದೀಗ ಮತ್ತೆ ಸಮಸ್ಯೆ ಉಲ್ಬಣಗೊಂಡಿದೆ ಎನ್ನಲಾಗಿದೆ. ಈ ಮಧ್ಯೆ, ಅಲ್ಲಿ ಸಂಪುಟ ಪುನರ್‌ ರಚನೆಯ ಕಸರತ್ತು ನಡೆಯತ್ತಿದೆ. ಈ ಬೆಳವಣಿಗೆಗಳ ನಡುವೆ ಅಲ್ಲಿನ ಗೆಹಲೋತ್ ಅವರನ್ನು ಶಿವಕುಮಾರ್‌ ಭೇಟಿ ಮಾಡುತ್ತಿರುವುದು ಕುತೂಹಲ ಮೂಡಿಸಿದೆ.

ADVERTISEMENT

ಜೈಪುರದಿಂದ ಸಂಜೆ ದೆಹಲಿಗೆ ಶಿವಕುಮಾರ್ ತೆರಳಲಿದ್ದಾರೆ. ಎಐಸಿಸಿ ನಾಯಕರನ್ನು ಅವರು ಬುಧವಾರ ಭೇಟಿ
ಮಾಡಲಿದ್ದಾರೆ. ರಾಜಸ್ಥಾನದ ರಾಜಕೀಯ ವಿದ್ಯಮಾನಗಳ ಕುರಿತು ಗೆಹಲೋತ್‌ ಜೊತೆ ನಡೆಸಿದ ಚರ್ಚೆ
ಯ ವಿವರವನ್ನು ವರಿಷ್ಠರ ಜೊತೆ ಹಂಚಿಕೊಳ್ಳುವ ಜೊತೆಗೆ, ರಾಜ್ಯದಲ್ಲಿ ಪಕ್ಷ ಸಂಘಟನೆಗೆ ಕೈಗೊಂಡಿರುವ ಕಾರ್ಯಕ್ರಮಗಳ ಕುರಿತು ವರದಿ ನೀಡಲಿದ್ದಾರೆ ಎಂದೂ ಮೂಲಗಳು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.