ADVERTISEMENT

ಕೋವಿಡ್: ಆಸ್ಪತ್ರೆ ದಾಖಲಾತಿ ಪ್ರಮಾಣ ಇಳಿಕೆ

​ಪ್ರಜಾವಾಣಿ ವಾರ್ತೆ
Published 19 ಜುಲೈ 2022, 15:43 IST
Last Updated 19 ಜುಲೈ 2022, 15:43 IST

ಬೆಂಗಳೂರು: ನಗರದಲ್ಲಿ ಕೋವಿಡ್ಆಸ್ಪತ್ರೆದಾಖಲಾತಿಸಂಖ್ಯೆ ಇಳಿಮುಖವಾಗಿದ್ದು, ಸದ್ಯ 27 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಮಂಗಳವಾರ 1,013 ಮಂದಿ ಕೋವಿಡ್ ಪೀಡಿತರಾಗಿರುವುದು ದೃಢಪಟ್ಟಿದೆ. ಸೋಂಕಿತರಲ್ಲಿ ಹೊಸದಾಗಿ 1,104 ಮಂದಿ ಚೇತರಿಸಿಕೊಂಡಿದ್ದಾರೆ.ಸದ್ಯ ನಗರದಲ್ಲಿ6,901 ಸಕ್ರಿಯ ಪ್ರಕರಣಗಳಿವೆ. ಸೋಂಕಿತರಲ್ಲಿ 21 ಮಂದಿ ಸಾಮಾನ್ಯ ಹಾಸಿಗೆಗಳಲ್ಲಿ ಚಿಕಿತ್ಸೆಗೆ ಒಳಗಾಗಿದ್ದಾರೆ. ಮೂವರು ಐಸಿಯು, ಇಬ್ಬರು ವೆಂಟಿಲೇಟರ್ ಸಹಿತ ಐಸಿಯು ಹಾಗೂ ಒಬ್ಬರು ಎಚ್‌ಡಿಯು ಹಾಸಿಗೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಉಳಿದವರು ಮನೆ ಆರೈಕೆಯಲ್ಲಿಯೇ ಚೇತರಿಸಿಕೊಳ್ಳುತ್ತಿದ್ದಾರೆ. ತಿಂಗಳ ಆರಂಭದಲ್ಲಿ ಆಸ್ಪತ್ರೆದಾಖಲಾತಿನೂರರ ಗಡಿ ಸಮೀಪಿಸಿತ್ತು.

ದೈನಂದಿನ ಕೋವಿಡ್ ಪರೀಕ್ಷೆಗಳ ಸಂಖ್ಯೆ 19 ಸಾವಿರದ ಗಡಿ ದಾಟಿದೆ. ಸೋಂಕು ದೃಢ ಪ್ರಮಾಣ ಶೇ 4.53ರಷ್ಟಿದೆ. ನಗರದಲ್ಲಿ ಈವರೆಗೆ ಕೋವಿಡ್ ಪೀಡಿತರಾದವರ ಒಟ್ಟು ಸಂಖ್ಯೆ 18.21 ಲಕ್ಷಕ್ಕೆ ಏರಿಕೆಯಾಗಿದೆ. ಸೋಂಕಿತರಲ್ಲಿ 17.97 ಲಕ್ಷ ಮಂದಿ ಚೇತರಿಸಿಕೊಂಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.