ADVERTISEMENT

Karnataka Covid-19 Update: ಸಕ್ರಿಯ ಪ್ರಕರಣ ಏರಿಕೆ

​ಪ್ರಜಾವಾಣಿ ವಾರ್ತೆ
Published 2 ಡಿಸೆಂಬರ್ 2021, 21:32 IST
Last Updated 2 ಡಿಸೆಂಬರ್ 2021, 21:32 IST
ಕೊರೊನಾ ವೈರಾಣು –ಪ್ರಾತಿನಿಧಿಕ ಚಿತ್ರ
ಕೊರೊನಾ ವೈರಾಣು –ಪ್ರಾತಿನಿಧಿಕ ಚಿತ್ರ   

ಬೆಂಗಳೂರು: ರಾಜ್ಯದಲ್ಲಿ ಗುರುವಾರ 363 ಮಂದಿ ಕೋವಿಡ್ ಪೀಡಿತರಾಗಿರುವುದು ದೃಢಪಟ್ಟಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 6,743ಕ್ಕೆ ಏರಿಕೆಯಾಗಿದೆ.

ಒಂದು ದಿನದ ಅವಧಿಯಲ್ಲಿ 1.06 ಲಕ್ಷ ಮಾದರಿಗಳನ್ನು ಪರೀಕ್ಷೆ ಮಾಡಲಾಗಿದೆ. ಸೋಂಕು ದೃಢ ಪ್ರಮಾಣ ಶೇ 0.34 ರಷ್ಟು ದೃಢಪಟ್ಟಿದೆ. ಐದು ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳ ಸಂಖ್ಯೆ ಎರಡಂಕಿ, 17 ಜಿಲ್ಲೆಗಳಲ್ಲಿ ಒಂದಂಕಿಯಲ್ಲಿದೆ. ಬೀದರ್, ಚಿಕ್ಕಬಳ್ಳಾಪುರ ಸೇರಿದಂತೆ 7 ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳು ವರದಿಯಾಗಿಲ್ಲ.

ಬೆಂಗಳೂರು ನಗರ (206), ಉತ್ತರ ಕನ್ನಡ (22) ಹಾಗೂ ದಕ್ಷಿಣ ಕನ್ನಡದಲ್ಲಿ (20) ಅಧಿಕ ಪ್ರಕರಣಗಳು ಪತ್ತೆಯಾಗಿವೆ. ಉಳಿದ ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳು 20ಕ್ಕಿಂತ ಕಡಿಮೆಯಿದೆ.ಈವರೆಗೆ ಸೋಂಕಿತರಾದವರ ಒಟ್ಟು ಸಂಖ್ಯೆ 29.96 ಲಕ್ಷ ದಾಟಿದೆ.

ADVERTISEMENT

ಬೆಂಗಳೂರಿನಲ್ಲಿ 5,024 ಸಕ್ರಿಯ ಪ್ರಕರಣಗಳಿವೆ.ಯಾದಗಿರಿ, ಬೀದರ್ ಸೇರಿದಂತೆ 10 ಜಿಲ್ಲೆಗಳಲ್ಲಿ ಸೋಂಕಿತರ ಸಂಖ್ಯೆ 10ಕ್ಕಿಂತ ಕಡಿಮೆಯಿದೆ.ಸೋಂಕಿತರಲ್ಲಿ 191 ಮಂದಿ ಚೇತರಿಸಿಕೊಂಡಿದ್ದಾರೆ. ಗುಣಮುಖರಾದವರ ಒಟ್ಟು ಸಂಖ್ಯೆ 29.51 ಲಕ್ಷ ದಾಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.