ADVERTISEMENT

ಪ್ರತ್ಯೇಕ ಒಳ ಮೀಸಲಾತಿಗೆ ಆಗ್ರಹ: ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಪ್ರತಿಭಟನೆ ಇಂದು 

​ಪ್ರಜಾವಾಣಿ ವಾರ್ತೆ
Published 3 ಸೆಪ್ಟೆಂಬರ್ 2025, 0:54 IST
Last Updated 3 ಸೆಪ್ಟೆಂಬರ್ 2025, 0:54 IST
<div class="paragraphs"><p>ಪ್ರಾತಿನಿಧಿಕ ಚಿತ್ರ&nbsp;</p></div>

ಪ್ರಾತಿನಿಧಿಕ ಚಿತ್ರ 

   

– ಪ್ರಜಾವಾಣಿ ಚಿತ್ರ

ಬೆಂಗಳೂರು: ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿ ಬರುವ ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕವಾಗಿ ಶೇಕಡ 1ರಷ್ಟು ಒಳ ಮೀಸಲಾತಿ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸೆಪ್ಟೆಂಬರ್‌ 3ರಂದು ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಕರ್ನಾಟಕ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟ ತಿಳಿಸಿದೆ. 

ADVERTISEMENT

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ರಾಜ್ಯ ಸಂಚಾಲಕರಾದ ಕೆ. ವೀರೇಶ್, ಶೇಷಪ್ಪ, ಬಿ.ಎಚ್. ಮಂಜುನಾಥ್, ಲೋಹಿತಾಕ್ಷ, ‘ನಾಗಮೋಹನ್‌ದಾಸ್‌ ಆಯೋಗವು ಪರಿಶಿಷ್ಟ ಜಾತಿಗಳ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸ್ಥಿತಿಗತಿಯ ದತ್ತಾಂಶಗಳನ್ನು ಸಂಗ್ರಹಿಸಿ, ವೈಜ್ಞಾನಿಕವಾಗಿ ಒಳ ಮೀಸಲಾತಿ ಹಂಚಿಕೆ ಮಾಡಿತ್ತು’ ಎಂದು ಹೇಳಿದರು. 

‘ಆಯೋಗವು ಅಲೆಮಾರಿ ಸಮುದಾಯಗಳಿಗೆ ಶೇ 1ರಷ್ಟು ಒಳ ಮೀಸಲಾತಿ ನೀಡುವಂತೆ ಶಿಫಾರಸು ಮಾಡಿತ್ತು. ಆದರೆ, ಸರ್ಕಾರ ವರದಿಯನ್ನು ಪರಿಷ್ಕರಿಸುವ ಮೂಲಕ ಅಲೆಮಾರಿ ಸಮುದಾಯಗಳಿಗೆ ಅನ್ಯಾಯ ಮಾಡಿದೆ’ ಎಂದು ದೂರಿದರು.   

‘ರಾಜ್ಯ ಸರ್ಕಾರ ಪರಿಶಿಷ್ಟ ಜಾತಿಗಳನ್ನು ಮೂರು ಗುಂಪುಗಳನ್ನಾಗಿ ವಿಂಗಡಿಸಿದೆ. ಇದರಲ್ಲಿ ಎಡಗೈ ಸಮುದಾಯಗಳ ಗುಂಪಿಗೆ ಶೇ 6, ಬಲಗೈ ಸಮುದಾಯಗಳ ಗುಂಪಿಗೆ ಶೇ 6 ಹಾಗೂ ಸ್ಪೃಶ್ಯ ಸಮುದಾಯಗಳ ಗುಂಪಿನಲ್ಲಿ ಅಲೆಮಾರಿಗಳನ್ನು ಸೇರಿಸಿ ಶೇ 5ರಷ್ಟು ಒಳ ಮೀಸಲಾತಿ ಪ್ರಮಾಣವನ್ನು ಹಂಚಿಕೆ ಮಾಡಿರುವುದು ಖಂಡನೀಯ’ ಎಂದು ಹೇಳಿದರು.  

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.