ಬೆಂಗಳೂರು: ಡ್ರಗ್ಸ್ ಸಾಗಣೆ ಹಾಗೂ ಮಾರಾಟದ ವಿರುದ್ಧ ಕಾರ್ಯಾಚರಣೆ ನಡೆಸಿದ್ದ ರಾಜ್ಯದ ಪೊಲೀಸರು, ಆರೋಪಿಗಳಿಂದ ಜಪ್ತಿ ಮಾಡಲಾದ ₹ 25.60 ಕೋಟಿ ಮೌಲ್ಯದ ಮಾದಕ ವಸ್ತುವನ್ನು ನಾಶಪಡಿಸಲು ಸಿದ್ಧತೆ ನಡೆಸುತ್ತಿದ್ದಾರೆ.
ಅಂತರರಾಷ್ಟ್ರೀಯ ಮಾದಕದ್ರವ್ಯ ವ್ಯಸನ ಹಾಗೂ ಕಳ್ಳಸಾಗಣೆ ವಿರುದ್ಧದ ದಿನವನ್ನು ಜೂನ್ 26ರಂದು ಆಚರಿಸಲಿರುವ ಪೊಲೀಸರು, ಅಂದೇ ಡ್ರಗ್ಸ್ ನಾಶಪಡಿಸಲು ಯೋಚಿಸಿದ್ದಾರೆ.
‘ರಾಜ್ಯದ ವಿವಿಧ ಠಾಣೆಗಳ ವ್ಯಾಪ್ತಿಯಲ್ಲಿ 12 ತಿಂಗಳಿನಲ್ಲಿ 8,505 ಪ್ರಕರಣ ದಾಖಲಿಸಿಕೊಳ್ಳಲಾಗಿದೆ. 7,846 ಆರೋಪಿಗಳನ್ನು ಬಂಧಿಸಲಾಗಿದೆ. ಇವರಿಂದ ಜಪ್ತಿ ಮಾಡಲಾದ ಎಲ್ಲ ಪ್ರಕಾರದ ಮಾದಕ ವಸ್ತುವನ್ನು ನಾಶಪಡಿಸುವ ಸಂಬಂಧ ನ್ಯಾಯಾಲಯದಿಂದ ಒಪ್ಪಿಗೆ ಪಡೆಯಲಾಗುತ್ತಿದೆ' ಎಂದು ಪೊಲೀಸ್ ಮೂಲಗಳು ಹೇಳಿವೆ.
‘2021ರಲ್ಲಿ ₹ 50.23 ಕೋಟಿ ಮೌಲ್ಯದ ಡ್ರಗ್ಸ್ ನಾಶಪಡಿಸಲಾಗಿತ್ತು‘ ಎಂದೂ ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.