ADVERTISEMENT

ಶಾಲೆಗಳ ಮಾನ್ಯತೆ ನವೀಕರಣ: ಜ. 25ರವರೆಗೆ ಅವಕಾಶ

​ಪ್ರಜಾವಾಣಿ ವಾರ್ತೆ
Published 19 ಜನವರಿ 2023, 15:31 IST
Last Updated 19 ಜನವರಿ 2023, 15:31 IST
   

ಬೆಂಗಳೂರು: ಖಾಸಗಿ ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳ ಮಾನ್ಯತೆಯ ನವೀಕರಣದ ಅವಧಿಯನ್ನು ಶಿಕ್ಷಣ ಇಲಾಖೆ ಜ.25ರವರೆಗೂ ವಿಸ್ತರಿಸಿದೆ.

ಶಾಲೆಗಳ ಮಾನ್ಯತೆ ನವೀಕರಣದ ಅವಧಿ ಕಳೆದ ನವೆಂಬರ್‌ನಲ್ಲೇ ಮುಕ್ತಾಯವಾಗಿತ್ತು. 2022–23ನೇ ಶೈಕ್ಷಣಿಕ ಅವಧಿಗೆ ಮಾನ್ಯತೆ ಮುಕ್ತಾಯವಾಗುವ ಶಾಲೆಗಳು ನವೀಕರಣಕ್ಕೆ ಅರ್ಜಿ ಸಲ್ಲಿಸದಿದ್ದರೆ, ಅವುಗಳನ್ನು ಅನಧಿಕೃತ ಶಾಲೆಗಳೆಂದು ಪರಿಗಣಿಸಲಾಗುವುದು. ಮಾನ್ಯತೆ ನವೀಕರಣ ಮಾಡದ ಶಾಲೆಗಳ ವಿದ್ಯಾರ್ಥಿಗಳನ್ನು ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಕೂರಿಸಲು ಸಾಧ್ಯವಾಗುವುದಿಲ್ಲ. ಅದಕ್ಕಾಗಿ ಕೊನೆಯ ಅವಕಾಶ ನೀಡಲಾಗುತ್ತಿದೆ.

‘ಶಾಲಾ ಅಡಳಿತ ಮಂಡಳಿಗಳು ಜ. 25ರ ಒಳಗೆ ಅರ್ಜಿ ಸಲ್ಲಿಸಬೇಕು. ಫೆ. 9ರ ಒಳಗೆ ಇಲಾಖೆ ಎಲ್ಲ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲಿದೆ. ಈ ಬಾರಿಯೂ ಅವಕಾಶ ಬಳಸಿಕೊಳ್ಳದ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು’ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಯುಕ್ತ ವಿಶಾಲ್‌ ಎಚ್ಚರಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.