ADVERTISEMENT

4 ಕ್ಷೇತ್ರಗಳಲ್ಲಿ ಚುನಾವಣಾ ಕಾವು

ಶನಿವಾರದಿಂದಲೇ ನೀತಿ ಸಂಹಿತೆ ಜಾರಿ * ಅ. 21ಕ್ಕೆ ಮತದಾನ

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2019, 20:47 IST
Last Updated 21 ಸೆಪ್ಟೆಂಬರ್ 2019, 20:47 IST
   

ಬೆಂಗಳೂರು: ಪಾಲಿಕೆ ವ್ಯಾಪ್ತಿಯ ಕೆ.ಆರ್.ಪುರ, ಮಹಾಲಕ್ಷ್ಮೀ ಲೇಔಟ್, ಯಶವಂತಪುರ ಹಾಗೂ ಶಿವಾಜಿನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಅ.21ರಂದು ನಡೆ ಯಲಿದ್ದು, ಶನಿವಾರದಿಂದಲೇ ನೀತಿ ಸಂಹಿತೆ ಜಾರಿಯಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಬಿ.ಎಚ್. ಅನಿಲ್‍ಕುಮಾರ್ ತಿಳಿಸಿದರು.

‘ಚುನಾವಣಾ ಕಾರ್ಯಕ್ಕೆ6,532 ಸಿಬ್ಬಂದಿ ನಿಯೋಜಿಸಲಾಗುವುದು. ಮೈಕ್ರೊ ಅಬ್ಸರ್ವರ್‌ಗಳನ್ನುಮತದಾನ ಪ್ರಕ್ರಿಯೆಗೆ ನಿಯೋಜಿಸಲಿದ್ದು, ಈ ಸಿಬ್ಬಂದಿಗೆ ತರಬೇತಿ ನೀಡಲಾಗುತ್ತದೆ’ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಚುನಾವಣೆಗೆ ಸಂಬಂಧಿಸಿದಂತೆ ದೂರು ನೀಡಲು ಅಥವಾ ಮತದಾರರ ಪಟ್ಟಿಗೆ ಸಂಬಂಧಿಸಿದ ಯಾವುದೇ ಪ್ರಶ್ನೆ ಗಳಿಗೆ ಉತ್ತರ ಪಡೆಯಲು ಮತದಾರರು ಉಚಿತ ಸಹಾಯವಾಣಿ ‘1950’ ಸಂಪರ್ಕಿಸಬಹುದು.

ADVERTISEMENT

ಮಾದರಿ ನೀತಿ ಸಂಹಿತೆ ಅನುಸಾರ ಮತದಾರರನ್ನು ಸೆಳೆಯುವ ಅಥವಾ ಪ್ರಭಾವ ಬೀರುವ ಯಾವುದೇ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳದಂತೆ ತೀವ್ರ ನಿಗಾ ವಹಿಸಲಾಗುವುದು ಎಂದು ಅವರು ತಿಳಿಸಿದರು.

ಎಲ್ಲೆಲ್ಲಿ ನಾಮಪತ್ರ ಸಲ್ಲಿಕೆ?: ಕೆ.ಆರ್. ಪುರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಗಳು ಹಳೇ ಮದ್ರಾಸ್ ರಸ್ತೆಯ ಕಂದಾಯ ಅಧಿಕಾರಿ ಕಚೇರಿ, ಯಶವಂತಪುರ ಕ್ಷೇತ್ರದಲ್ಲಿ ಕೆಂಗೇರಿ ಉಪನಗರದ ಕರ್ನಾಟಕ ಬ್ಯಾಂಕ್ ಕಟ್ಟಡದ ಕಂದಾಯ ಕಚೇರಿ, ಮಹಾ ಲಕ್ಷ್ಮೀ ಲೇಔಟ್ ಕ್ಷೇತ್ರದಲ್ಲಿ ನಾಗಪುರದ ಬಿಬಿಎಂಪಿ ಕಚೇರಿ, ಶಿವಾಜಿನಗರ ಕ್ಷೇತ್ರದಲ್ಲಿ ಕ್ವೀನ್ಸ್ ರಸ್ತೆಯ ಮತದಾರರ ನೋಂದಣಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಬಹುದು ಎಂದು ಜಿಲ್ಲಾ ಚುನಾವಣಾಧಿಕಾರಿ ಅನಿಲ್‍ಕುಮಾರ್ ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.