
ಪ್ರಜಾವಾಣಿ ವಾರ್ತೆಬೆಂಗಳೂರು: ರಾಜ್ಯದ ಎಲ್ಲ ಸರ್ಕಾರಿ ಅಧಿಕಾರಿಗಳು, ನೌಕರರು ತಿಂಗಳ ಮೊದಲ ಶುಕ್ರವಾರ ಖಾದಿ ಉಡುಪು ಧರಿಸಿ ಕಚೇರಿಗೆ ಬರುವ ಸಂಬಂಧ ವಸ್ತ್ರ ಸಂಹಿತೆ ಜಾರಿಗೊಳಿಸಲು ಸರ್ಕಾರ ಮುಂದಾಗಿದೆ.
ಅಲ್ಲದೆ ಸ್ವಾತಂತ್ರ್ಯ ದಿನಾಚರಣೆ, ಗಣರಾಜ್ಯೋತ್ಸವ ಸೇರಿದಂತೆ ಅಧಿಕೃತ ಸರ್ಕಾರಿ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಅಧಿಕಾರಿಗಳು ಹಾಗೂ ಸಿಬ್ಬಂದಿ ಖಾದಿ ಉಡುಪು ಧರಿಸುವುದಕ್ಕೆ ಒತ್ತು ನೀಡಲಾಗುತ್ತಿದೆ.
ಈ ಕುರಿತು ಚರ್ಚಿಸಲು ಗುರುವಾರ (ಜ.29) ಮಧ್ಯಾಹ್ನ 12ಕ್ಕೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ಸಭೆ ನಡೆಯಲಿದೆ. ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಸೇರಿದಂತೆ ಪ್ರಮುಖರನ್ನು ಈ ಸಭೆಗೆ ಆಹ್ವಾನಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.