ADVERTISEMENT

ಎಫ್‌ಐಆರ್ ರದ್ದು ಕೋರಿದ್ದ ನಟ ಪ್ರಕಾಶ್ ರಾಜ್ ಅರ್ಜಿ ತಿರಸ್ಕಾರ

​ಪ್ರಜಾವಾಣಿ ವಾರ್ತೆ
Published 13 ಅಕ್ಟೋಬರ್ 2020, 21:21 IST
Last Updated 13 ಅಕ್ಟೋಬರ್ 2020, 21:21 IST
ನಟ ಪ್ರಕಾಶ್ ರಾಜ್
ನಟ ಪ್ರಕಾಶ್ ರಾಜ್   

ಬೆಂಗಳೂರು: ಅನುಮತಿ ಪಡೆಯದೆ ಪ್ರತಿಭಟನೆ ನಡೆಸಿದ್ದಕ್ಕಾಗಿ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ದಾಖಲಿಸಿರುವ ಎಫ್‌ಐಆರ್ ರದ್ದು ಕೋರಿ ನಟ ಪ್ರಕಾಶ್ ರಾಜ್ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದೆ.

ಸಂಬಂಧಪಟ್ಟ ಪ್ರಾಧಿಕಾರದಿಂದ ಅನುಮತಿ ಪಡೆಯದೆ ಮೈಕ್ ಬಳಸಿದ್ದಾರೆ. ಪಾದಚಾರಿಗಳಿಗೆ ಮತ್ತು ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ ಎಂದು ಆರೋಪಿಸಿ 2019ರ ಮಾರ್ಚ್‌ನಲ್ಲಿ ಚುನಾವಣಾ ಕರ್ತವ್ಯದಲ್ಲಿದ್ದ ಬಿಬಿಎಂಪಿ ಅಧಿಕಾರಿಯೊಬ್ಬರು ಪೊಲೀಸರಿಗೆ ದೂರು ನೀಡಿದ್ದರು.

‘ಎಂ.ಜಿ. ರಸ್ತೆಯಲ್ಲಿ ಪ್ರತಿಭಟನೆ ನಡೆಸಲು ಅನುಮತಿ ಕೋರಿತ್ಯಾಗರಾಜನಗರ ಗ್ರಾಮ ಸೇವಾ ಸಂಘದಿಂದ ಬಿಬಿಎಂಪಿಗೆ ಮನವಿ ಸಲ್ಲಿಸಲಾಗಿತ್ತು.ಪ್ರತಿಭಟನೆಯ ಸಮಯದಲ್ಲಿ ನಾನು ನಾಮಪತ್ರ ಸಲ್ಲಿಸಿರಲಿಲ್ಲ. ರಾಜಕೀಯ ಕಾರ್ಯಕ್ರಮವಲ್ಲದ ಕಾರಣ ಅನುಮತಿ ಅಗತ್ಯವಿಲ್ಲ ಎಂದು ಬಿಬಿಎಂಪಿ ಹಿಂಬರಹ ನೀಡಿತ್ತು’ ಎಂದು ಪ್ರಕಾಶ್‌ ರಾಜ್ ಅರ್ಜಿಯಲ್ಲಿ ವಾದಿಸಿದ್ದರು.

ADVERTISEMENT

‘ಅಫಿಡವಿಟ್‌ ಸಲ್ಲಿಸದಿರುವ ಕಾರಣದಿಂದ ಅರ್ಜಿದಾರರಿಗೆ ಯಾವುದೇ ಅನ್ಯಾಯವಾಗಿಲ್ಲ. ಸಿಆರ್‌ಪಿಸಿ ಸೆಕ್ಷನ್‌ 482 ಅಡಿಯಲ್ಲಿ ದೋಷಾರೋಪಪಟ್ಟಿ ನಿರಾಕರಣೆ ಮಾಡಲು ಆಗುವುದಿಲ್ಲ’ ಎಂದು ತಿಳಿಸಿದ ಪೀಠ, ಅರ್ಜಿ ವಜಾಗೊಳಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.