ADVERTISEMENT

ರಾಜ್ಯದ ಹಲವು ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್‌’

​ಪ್ರಜಾವಾಣಿ ವಾರ್ತೆ
Published 25 ಆಗಸ್ಟ್ 2025, 15:17 IST
Last Updated 25 ಆಗಸ್ಟ್ 2025, 15:17 IST
ಮಳೆ
ಮಳೆ   

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಂಗಳವಾರ ಮತ್ತು ಬುಧವಾರ ಭಾರಿ ಮಳೆಯಾಗುವ ಬಗ್ಗೆ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ, ಬಹುತೇಕ ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್‌‘ ನೀಡಿದೆ.

ಉಡುಪಿ, ದಕ್ಷಿಣ ಕನ್ನಡ ಹೊರತು ಪಡಿಸಿ ಉಳಿದ ಜಿಲ್ಲೆಗಳಲ್ಲಿ ಗಾಳಿ ಸಹಿತ ಜೋರು ಮಳೆಯಾಗುವ ಸಾಧ್ಯತೆ ಇದೆ. ಕೆಲವೆಡೆ ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಂಭವ ಇದೆ ಎಂದು ಇಲಾಖೆ ತಿಳಿಸಿದೆ.

ಭಾರಿ ಮಳೆಯ ಮುನ್ಸೂಚನೆ ನೀಡಲಾದ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಹಲವೆಡೆ ಗಂಟೆಗೆ 40 ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸಬಹುದು. 

ADVERTISEMENT

ಕರಾವಳಿಯಲ್ಲಿ ಪ್ರತಿ ಗಂಟೆಗೆ 50 ರಿಂದ 60 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಗಾಳಿ ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಪ್ರತಿ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ತಿಳಿಸಿದೆ.

ಸೋಮವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಕ್ಯಾಸೆಲ್ ರಾಕ್ ಮತ್ತು ಕದ್ರಾದಲ್ಲಿ 1 ಸೆಂ.ಮೀ. ಮಳೆ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.