ADVERTISEMENT

ರಸ್ತೆ ಗುಂಡಿ: ವಿವರ ಕೇಳಿದ ಹೈಕೋರ್ಟ್‌

​ಪ್ರಜಾವಾಣಿ ವಾರ್ತೆ
Published 1 ಜುಲೈ 2019, 19:26 IST
Last Updated 1 ಜುಲೈ 2019, 19:26 IST

ಬೆಂಗಳೂರು: ‘ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ (ಬಿಬಿಎಂಪಿ) ತೆರೆದ ರಸ್ತೆ ಗುಂಡಿಗಳನ್ನು ಮುಚ್ಚುವ ವಿಚಾರಕ್ಕೆ ಸಂಬಂಧಿಸಿದಂತೆ ಈವರೆಗೂ ನೀಡಲಾಗಿರುವ ಆದೇಶಗಳ ಪಾಲನೆ ಬಗ್ಗೆ ವರದಿ ನೀಡಿ’ ಎಂದು ಹೈಕೋರ್ಟ್‌, ಬಿಬಿಎಂಪಿಗೆ ಆದೇಶಿಸಿದೆ.

‘ನಗರದಲ್ಲಿನ ರಸ್ತೆ ಗುಂಡಿಗಳಿಂದ ಸಾರ್ವಜನಿಕರು ಸಾವು ನೋವುಗಳಿಗೆ ಈಡಾಗುತ್ತಿದ್ದಾರೆ’ ಎಂದು ಆಕ್ಷೇಪಿಸಿ ಕೋರಮಂಗಲದ ವಿಜಯನ್ ಮೆನನ್ ಸೇರಿದಂತೆ ನಾಲ್ವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್‌ ಎಸ್‌.ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

‘ಪ್ರಕರಣಕ್ಕೆ ಸಂಬಂಧಿಸಿದಂತೆ 2018ರ ಡಿಸೆಂಬರ್ ಮತ್ತು 2019ರ ಜನವರಿಯಲ್ಲಿ ಹೈಕೋರ್ಟ್ ನೀಡಿರುವ ಆದೇಶಗಳ ಪಾಲನೆ ಕುರಿತ ವರದಿಯನ್ನು ಕೋರ್ಟ್‌ಗೆ ಸಲ್ಲಿಸಿ’ ಎಂದು ಸೂಚಿಸಿದ ನ್ಯಾಯಪೀಠ ವಿಚಾರಣೆ ಮುಂದೂಡಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.