ADVERTISEMENT

ವಿಭಾಗೀಯ ನ್ಯಾಯಪೀಠಕ್ಕೆ ವರ್ಗ

​ಪ್ರಜಾವಾಣಿ ವಾರ್ತೆ
Published 14 ಆಗಸ್ಟ್ 2019, 19:44 IST
Last Updated 14 ಆಗಸ್ಟ್ 2019, 19:44 IST
.
.   

ಬೆಂಗಳೂರು: ‘ರಾಜ್ಯದಲ್ಲಿ ಒಬ್ಬ ಶಾಸಕರಿಗೇ ರಕ್ಷಣೆ ಇಲ್ಲ, ಅವರ ಮೇಲೆಯೇ ಹಲ್ಲೆ ನಡೆಯುತ್ತದೆ ಎಂದಾದರೆ ಸಾಮಾನ್ಯ ನಾಗರಿಕರ ಕತೆಯೇನು’ ಎಂದು ಹೈಕೋರ್ಟ್‌ ಕಳವಳ ವ್ಯಕ್ತಪಡಿಸಿದೆ.

‘ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್‌ ಪಕ್ಷದ ಶಾಸಕರಾಗಿ ಆಯ್ಕೆಯಾಗಿ ಸದ್ಯ ಅನರ್ಹಗೊಂಡಿರುವ ಡಾ.ಕೆ.ಸುಧಾಕರ್ ಅವರನ್ನು ಕಳೆದ ತಿಂಗಳ 10ರಂದು ವಿಧಾನಸೌಧದ ಕಾರಿಡಾರ್‌ನಲ್ಲಿ ಎಳೆದಾಡಿ ಹಲ್ಲೆ ನಡೆಸಲಾಗಿದೆ’ ಎಂಬ ಆರೋಪಕ್ಕೆ ಸಂಬಂಧಿಸಿದ ರಿಟ್‌ ಅರ್ಜಿ ವಿಚಾರಣೆ ವೇಳೆ ನ್ಯಾಯಮೂರ್ತಿ ಅಲೋಕ್ ಅರಾಧೆ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ಈ ಅಭಿಪ್ರಾಯ ವ್ಯಕ್ತಪಡಿಸಿದೆ.

ವಿಚಾರಣೆ ವೇಳೆ ಅರ್ಜಿದಾರ ವಕೀಲ ಎನ್‌.ಪಿ.ಅಮೃತೇಶ್‌ ಪರ ವಾದ ಮಂಡಿಸಿದ ವಕೀಲ ಎಂ.ಅರುಣ್‌ ಶ್ಯಾಮ್‌ ಅವರು, ‘ಸುಧಾಕರ್ ಅಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ವಿಧಾನಸಭಾಧ್ಯಕ್ಷರ ಕಚೇರಿಗೆ ಹೋಗುತ್ತಿದ್ದರು. ಈ ವೇಳೆ ಕೆಲವರು ಅವರನ್ನು ಅಡ್ಡಗಟ್ಟಿ ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಪ್ರಕರಣದ ಬಗ್ಗೆ ವಿಧಾನಸೌಧ ಪೊಲೀಸ್‌ ಠಾಣೆಯಲ್ಲಿ ದೂರು ನೀಡಲಾಗಿದೆ. ಈ ಕುರಿತು ಎಫ್‌ಐಆರ್ ದಾಖಲಾಗಿದೆ. ಆದರೆ, ಸಮಗ್ರ ತನಿಖೆ ನಡೆಯುತ್ತಿಲ್ಲ’ ಎಂದು ವಿವರಿಸಿದರು.

ADVERTISEMENT

ಇದಕ್ಕೆ ಆತಂಕ ವ್ಯಕ್ತಪಡಿಸಿದ ನ್ಯಾಯಪೀಠ, ‘ಜನಪ್ರತಿನಿಧಿಗಳ ಮೇಲೇ ಈ ರೀತಿಯ ಹಲ್ಲೆ ನಡೆಯುತ್ತದೆ ಎಂದರೆ ಏನರ್ಥ’ ಎಂದು ಪ್ರಶ್ನಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.