ADVERTISEMENT

ವಿಳಂಬ ಏಕೆ?: ಹೈಕೋರ್ಟ್ ಪ್ರಶ್ನೆ

​ಪ್ರಜಾವಾಣಿ ವಾರ್ತೆ
Published 24 ಫೆಬ್ರುವರಿ 2020, 20:21 IST
Last Updated 24 ಫೆಬ್ರುವರಿ 2020, 20:21 IST

ಬೆಂಗಳೂರು: ‘ಕರ್ನಾಟಕ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ಅಧ್ಯಕ್ಷರ ನೇಮಕಕ್ಕೆ ಸಂಬಂಧಿಸಿದಂತೆ ಈ ಹಿಂದೆ ಹೈಕೋರ್ಟ್‌ ನೀಡಿದ್ದ ಆದೇಶದ ಅನುಸಾರ ನಿಯಮ ರೂಪಿಸುವ ದಿಸೆಯಲ್ಲಿ ವಿಳಂಬ ಮಾಡಿರುವ ಕುರಿತು ವಿವರಣೆ ನೀಡಿ’ ಎಂದು ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

ಡಾ. ಎಂ. ಸುಧೀಂದ್ರ ರಾವ್ ಅವರನ್ನು ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ನಾಮ ನಿರ್ದೇಶನ ಮಾಡಿದ ಕ್ರಮವನ್ನು ಪ್ರಶ್ನಿಸಿ ‘ಕಮಿಟಿ ಫಾರ್ ಪಬ್ಲಿಕ್ ಅಕೌಂಟೆಬಲಿಟಿ’ ಅಧ್ಯಕ್ಷ ಎಸ್. ಶಿವಕುಮಾರ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್‌ ಎಸ್.ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ, ವಿಚಾರಣೆ ನಡೆಸಿತು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT