ADVERTISEMENT

ದನಗಳು ಸಾಯುವ ಮುನ್ನ ನೀರುಣಿಸಿ: ಹೈಕೋರ್ಟ್‌ ಕಿಡಿ

​ಪ್ರಜಾವಾಣಿ ವಾರ್ತೆ
Published 30 ಏಪ್ರಿಲ್ 2019, 19:55 IST
Last Updated 30 ಏಪ್ರಿಲ್ 2019, 19:55 IST

ಬೆಂಗಳೂರು: ‘ಜಾನುವಾರಗಳು ನೀರಿಲ್ಲದೇ ಸಾಯುವ ಮೊದಲು ಅವುಗಳಿಗೆ ನೀರುಣಿಸಿ’ ಎಂದು ಹೈಕೋರ್ಟ್‌ ರಾಜ್ಯ ಸರ್ಕಾರಕ್ಕೆ ಮೌಖಿಕ ತಾಕೀತು ಮಾಡಿದೆ.

ರಾಜ್ಯ ಕಾನೂನು ಸೇವೆಗಳಪ್ರಾಧಿಕಾರ ಮತ್ತು ತುಮಕೂರುಜಿಲ್ಲೆಯ ಗುಬ್ಬಿ ತಾಲ್ಲೂಕಿನ ಚೇಳೂರಿನ ಎ.ಮಲ್ಲಿಕಾರ್ಜುನ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ನ್ಯಾಯಮೂರ್ತಿ ಬಿ.ವೀರಪ್ಪ ಮತ್ತು ನ್ಯಾಯಮೂರ್ತಿ ಆರ್.ದೇವದಾಸ್ ಅವರಿದ್ದ ರಜಾಕಾಲದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

ಸರ್ಕಾರದ ಪರ ವಕೀಲ ಡಿ.ನಾಗರಾಜ ಅವರು, ರಾಜ್ಯದಲ್ಲಿನ ಬರ ಪರಿಸ್ಥಿತಿ ಸಂಬಂಧಿಸಿ ಕೈಗೊಳ್ಳಲಾಗಿರುವಕ್ರಮಗಳ ಬಗ್ಗೆ ಹೇಳಿಕೆ ಸಲ್ಲಿಸಿದರು.

ADVERTISEMENT

ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ‘ಜಾನುವಾರುಗಳು ಸಾಯುವ ಮುನ್ನವೇ ಅವುಗಳ ಕಡೆ ಗಮನ ಕೊಡಿ’ ಎಂದು ನಿರ್ದೇಶಿಸಿತು.

‘ಸಂಪೂರ್ಣ ಅಂಕಿ ಅಂಶದೊಂದಿಗೆ ಕೋರ್ಟ್‌ಗೆ ಮಾಹಿತಿ ನೀಡಿ’ ಎಂದು ನಾಗರಾಜು ಅವರಿಗೆ ನಿರ್ದೇಶಿಸಿದ ನ್ಯಾಯಪೀಠ ವಿಚಾರಣೆಯನ್ನು ಮೇ 3ಕ್ಕೆ ಮುಂದೂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.