ADVERTISEMENT

ಮಂಗಳೂರು ಗೋಲಿಬಾರ್‌ ಸರ್ಕಾರಕ್ಕೆ ನೋಟಿಸ್‌

ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ

​ಪ್ರಜಾವಾಣಿ ವಾರ್ತೆ
Published 29 ಜನವರಿ 2020, 6:17 IST
Last Updated 29 ಜನವರಿ 2020, 6:17 IST
.
.   

ಬೆಂಗಳೂರು: ‘ಪೌರತ್ವ (ತಿದ್ದುಪಡಿ) ಕಾಯ್ದೆ ವಿರೋಧಿಸಿ ಕಳೆದ ವರ್ಷದ ಡಿಸೆಂಬರ್ 19ರಂದು ಮಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಹಿಂಸಾಚಾರ ಸಂಭವಿಸಿದಾಗ ನಡೆದ ಗೋಲಿಬಾರ್ ಕುರಿತು ತನಿಖೆ ನಡೆಸಲು ಎಸ್‌ಐಟಿ ರಚಿಸಬೇಕು’ ಎಂದು ಕೋರಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್‌ ಆದೇಶಿಸಿದೆ.

ಈ ಕುರಿತಂತೆ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ ಮತ್ತು ಮಂಗಳೂರಿನ ಕೆ.ಅಶ್ರಫ್‌ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್. ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

ಪ್ರತಿವಾದಿಗಳಾದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಗೃಹ ಇಲಾಖೆ ಪ್ರಧಾನ ಕಾರ್ಯದರ್ಶಿ ಹಾಗೂ ಮಂಗಳೂರು ನಗರ ಪೊಲೀಸ್ ಆಯುಕ್ತರಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದ ನ್ಯಾಯಪೀಠ, ಫೆಬ್ರುವರಿ 4ರೊಳಗೆ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿದೆ.

ADVERTISEMENT

ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾಗಿರುವ ಮತ್ತೊಂದು ಅರ್ಜಿಯನ್ನೂ ಇದೇ ಅರ್ಜಿಯ ಜೊತೆ ವಿಚಾರಣೆ ನಡೆಸಲಾಗುವುದು ಎಂದು ನ್ಯಾಯಪೀಠ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.