ಬೆಂಗಳೂರು: ಕರ್ನಾಟಕ ಜಾನಪದ ಅಕಾಡೆಮಿಯು 2020ನೇ ಸಾಲಿನ ಪುಸ್ತಕ ಬಹುಮಾನ ಘೋಷಿಸಿದ್ದು, ಸಿಂದಗಿಯ ಚನ್ನಪ್ಪ ಕಟ್ಟಿ ಅವರ‘ಅಮೋಘ ಸಿದ್ಧ ಜನಪದ ಮಹಾಕಾವ್ಯ’ ಸೇರಿದಂತೆ ಮೂವರು ಲೇಖಕರ ಕೃತಿಗಳು ಆಯ್ಕೆಯಾಗಿವೆ.
ತುಮಕೂರಿನ ಪಾವಗಡದ ಸುರೇಶ್ ನಾಗಲಮಡಿಕೆ ಅವರ ‘ಹಾಡು ಕಲಿಸಿದ ಹರ’ (ಜನಪದ ಮಹಾಕಾವ್ಯಗಳು: ಸಂಸ್ಕೃತಿ ಸಂಕಥನ) ಹಾಗೂ ಉಡುಪಿಯ ತಲ್ಲೂರು ಶಿವರಾಮ ಶೆಟ್ಟಿ ಅವರ ‘ಕಲಾ ಸಂಚಯ ದಕ್ಷಿಣ ಭಾರತದ ಕೆಲವು ಅನುಷ್ಠಾನ ಕಲೆಗಳು’ ಕೃತಿ ಪುಸ್ತಕ ಬಹುಮಾನಕ್ಕೆ ಭಾಜನವಾಗಿವೆ.
ಈ ಬಹುಮಾನವು ತಲಾ ₹ 25 ಸಾವಿರ ನಗದು ಹಾಗೂ ಸ್ಮರಣಿಕೆ ಒಳಗೊಂಡಿದೆ. ಏಪ್ರಿಲ್ ತಿಂಗಳಲ್ಲಿ ವಿಜಯನಗರದ ಹೊಸಪೇಟೆಯಲ್ಲಿ ನಡೆಯುವ ಅಕಾಡೆಮಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿಯೇ ಪುಸ್ತಕ ಬಹುಮಾನ ನೀಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.