ಸಿದ್ದರಾಮಯ್ಯ
ಬೆಂಗಳೂರು: ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ 75ನೇ ವರ್ಷದ ‘ಅಮೃತ ಸಂಭ್ರಮ’ ಆಗಸ್ಟ್ 23ರಂದು ನಡೆಯಲಿದೆ.
ಅರಮನೆ ರಸ್ತೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ನ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಬೆಳಿಗ್ಗೆ 10.30ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮಾರಂಭ ಉದ್ಘಾಟಿಸಲಿದ್ದು, ಶಾಸಕ ಕೆ.ಎನ್.ರಾಜಣ್ಣ ಅವರು ಸ್ಮರಣ ಸಂಚಿಕೆ ಬಿಡುಗಡೆ ಮಾಡುವರು. ಸಚಿವ ಸತೀಶ್ ಜಾರಕಿಹೊಳಿ ಸುವರ್ಣ ಭವನ ಲಿಫ್ಟ್ ಉದ್ಘಾಟಿಸುವರು. ಇದೇ ವೇಳೆ ಮಣಿಪಾಲ್ ಆಸ್ಪತ್ರೆ ವತಿಯಿಂದ ಉಚಿತವಾಗಿ ಆರೋಗ್ಯ ತಪಾಸಣಾ ಶಿಬಿರ ಏರ್ಪಡಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಎಂ.ರಮೇಶ್ (ಪಾಳ್ಯ) ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.