ADVERTISEMENT

ಕರ್ನಾಟಕ ಲಲಿತಕಲಾ ಅಕಾಡೆಮಿ: ಕಲಾ ಸ್ಪರ್ಧೆ, ಪ್ರದರ್ಶನಕ್ಕೆ ಅರ್ಜಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 15 ಜುಲೈ 2025, 23:25 IST
Last Updated 15 ಜುಲೈ 2025, 23:25 IST
<div class="paragraphs"><p>ಕಡತ</p></div>

ಕಡತ

   

(ಸಾಂದರ್ಭಿಕ ಚಿತ್ರ)

ಬೆಂಗಳೂರು: ಕರ್ನಾಟಕ ಲಲಿತಕಲಾ ಅಕಾಡೆಮಿಯು 53ನೇ ವಾರ್ಷಿಕ ಕಲಾ ಸ್ಪರ್ಧೆ ಹಾಗೂ ಕಲಾ ಪ್ರದರ್ಶನಕ್ಕೆ ಚಿತ್ರಕಲಾವಿದರಿಂದ ಅರ್ಜಿ ಆಹ್ವಾನಿಸಿದೆ. 

ADVERTISEMENT

ತೀರ್ಪುಗಾರರು ಆಯ್ಕೆ ಮಾಡಿದ ಒಟ್ಟು 10 ಕಲಾಕೃತಿಗಳ ಕಲಾವಿದರಿಗೆ ತಲಾ ₹25 ಸಾವಿರ ನಗದು ಬಹುಮಾನ ಹಾಗೂ ಪ್ರಶಸ್ತಿ ಫಲಕವನ್ನು ನೀಡಲಾಗುತ್ತದೆ. ಪ್ರವೇಶ ಶುಲ್ಕ ₹300 ನಗದು ರೂಪದಲ್ಲಿ ಅಥವಾ ಡಿಡಿ ಮೂಲಕ ರಿಜಿಸ್ಟ್ರಾರ್, ಕರ್ನಾಟಕ ಲಲಿತಕಲಾ ಅಕಾಡೆಮಿಗೆ ಪಾವತಿಸಬೇಕಾಗುತ್ತದೆ.

ಭರ್ತಿ ಮಾಡಿದ ಅರ್ಜಿ ನಮೂನೆಯ ಜತೆಗೆ ಕಲಾಕೃತಿಯ ಛಾಯಾಚಿತ್ರ ಹಾಗೂ ದಾಖಲಾತಿಗಳನ್ನು ಆ.16ರೊಳಗೆ ರಿಜಿಸ್ಟ್ರಾರ್, ಕರ್ನಾಟಕ ಲಲಿತಕಲಾ ಅಕಾಡೆಮಿ, 2ನೇ ಮಹಡಿ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು–560002 ಈ ವಿಳಾಸಕ್ಕೆ ನೇರವಾಗಿ ಅಥವಾ ಅಂಚೆಯ ಮೂಲಕ ಸಲ್ಲಿಸಬಹುದಾಗಿದೆ.

ಲಕೋಟೆಯ ಮೇಲೆ 53ನೇ ವಾರ್ಷಿಕ ಕಲಾ ಪ್ರದರ್ಶನಕ್ಕಾಗಿ ಅರ್ಜಿ ಎನ್ನುವುದನ್ನು ಸ್ಪಷ್ಟವಾಗಿ ಸಮೂದಿಸಿರಬೇಕು. ವಿವರಕ್ಕೆ www.lalitkala.karnataka.gov.inಗೆ ಭೇಟಿ ನೀಡಿ ಎಂದು ಪ್ರಕಟಣೆಯಲ್ಲಿ ಅಕಾಡೆಮಿಯ ರಿಜಿಸ್ಟ್ರಾರ್ ಬಿ. ನೀಲಮ್ಮ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.