ADVERTISEMENT

ಬೆಂಗಳೂರು: ಲೇಖಕಿಯರ ಸಂಘಕ್ಕೆ ಡಿಸೆಂಬರ್‌ನಲ್ಲಿ ಚುನಾವಣೆ

​ಪ್ರಜಾವಾಣಿ ವಾರ್ತೆ
Published 11 ಅಕ್ಟೋಬರ್ 2025, 16:16 IST
Last Updated 11 ಅಕ್ಟೋಬರ್ 2025, 16:16 IST
   

ಬೆಂಗಳೂರು: ಕರ್ನಾಟಕ ಲೇಖಕಿಯರ ಸಂಘಕ್ಕೆ ಮುಂಬರುವ ಡಿಸೆಂಬರ್ ತಿಂಗಳಲ್ಲಿ ಚುನಾವಣೆ ನಡೆಸಲು ನಿರ್ಧರಿಸಲಾಗಿದೆ. 

ಶನಿವಾರ ಇಲ್ಲಿ ನಡೆದ ಸಂಘದ ಸರ್ವ ಸದಸ್ಯರ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಚುನಾವಣೆ ಅಧಿಕಾರಿಯಾಗಿ ಸಾಮಾಜಿಕ ಕಾರ್ಯಕರ್ತೆಯೂ ಆಗಿರುವ ವಕೀಲೆ ಪ್ರತಿಭಾ ಆರ್. ಅವರನ್ನು ನೇಮಿಸಲಾಗಿದೆ.

ಸೆ.7ರಂದು ನಡೆದ ಸಭೆಯ ಮುಂದುವರಿದ ಭಾಗವಾಗಿ ಈ ಸಭೆ ನಡೆಸಲಾಯಿತು. ಹಿಂದೆ ಮಂಡಿಸಿದ 2024-25ನೇ ಸಾಲಿನ ಲೆಕ್ಕ ಪರಿಶೋಧನಾ ವರದಿ ಕನ್ನಡದಲ್ಲಿ ಇಲ್ಲವೆಂದು, ಅದಕ್ಕೆ ಸಂಬಂಧಿಸಿದ ಕೆಲವು ಪ್ರಶ್ನೆಗಳಿಗೆ ಉತ್ತರಿಸಲು ಈ ಸಭೆಯನ್ನು ಆಯೋಜಿಸಲಾಗಿತ್ತು. ಸಭೆಯಲ್ಲಿ ಹಲವಾರು ವಿಷಯಗಳ ಬಗ್ಗೆ ಹಾಗೂ ಲೇಖಕಿಯರ ಸಮ್ಮೇಳನದ ಖರ್ಚು ವೆಚ್ಚದ ಬಗ್ಗೆ ಸುಧೀರ್ಘವಾಗಿ ಚರ್ಚಿಸಲಾಯಿತು ಎಂದು ಸಂಘದ ಅಧ್ಯಕ್ಷೆ ಎಚ್.ಎಲ್. ಪುಷ್ಪ ಅವರು ತಿಳಿಸಿದ್ದಾರೆ.

ADVERTISEMENT

‘ಲೆಕ್ಕಾಚಾರದಲ್ಲಿ ಗೊಂದಲ ಇತ್ತು. ಆದರೆ, ಲೆಕ್ಕಪತ್ರ ನಿರ್ವಹಣೆ ಮತ್ತು ಲೆಕ್ಕಪರಿಶೋಧನಾ ಪ್ರಸ್ತುತಿಯಲ್ಲಿ ವ್ಯತ್ಯಾಸವಿದೆ ಎಂಬ ಆಕ್ಷೇಪಗಳಿದ್ದರೂ ಕೆಲವು ತಿದ್ದುಪಡಿಗಳನ್ನು ಸೂಚಿಸಿ, ಬಹುಮತದಿಂದ ಲೆಕ್ಕಪತ್ರವನ್ನು ಸಭೆಯಲ್ಲಿ ಅಂಗೀಕರಿಸಿ ಅನುಮೋದಿಸಲಾಯಿತು’ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.