
ಪ್ರಜಾವಾಣಿ ವಾರ್ತೆಅಜಿತ್ ಪವಾರ್
– ಪಿಟಿಐ ಚಿತ್ರ
ಬೆಂಗಳೂರು: ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿದ್ದ ಅಜಿತ್ ಪವಾರ್ ಅವರು ವಿಮಾನ ದುರಂತದಲ್ಲಿ ಮೃತಪಟ್ಟ ಪ್ರಕರಣದ ಬಗ್ಗೆ ಸೂಕ್ತ ತನಿಖೆಯಾಗಬೇಕು ಎಂದು ಕರ್ನಾಟಕ ಪ್ರದೇಶ ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷ (ಎನ್‌ಸಿಪಿ) ಶುಕ್ರವಾರ ಆಗ್ರಹಿಸಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎನ್‌ಸಿಪಿ ರಾಜ್ಯ ಘಟಕದ ಅಧ್ಯಕ್ಷ ಹೂಡಿ ಪ್ರದೀಪ್ ಕುಮಾರ್, ‘ವಿಮಾನ ದುರಂತದ ಹಿಂದೆ ರಾಜಕೀಯ ಹುನ್ನಾರದ ಶಂಕೆ ಇದೆ’ ಎಂದರು.
ಅಜಿತ್ ಪವಾರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಅವರಿಗೆ ಶ್ರದ್ದಾಂಜಲಿ ಸಲ್ಲಿಸಲಾಯಿತು.
ಪಕ್ಷದ ಮುಖಂಡರಾದ ವಿಜಯಲಕ್ಷ್ಮೀ ಎ., ವೈಭವ್ ಟಂಡನ್, ನಾಗಭೂಷಣ್, ಈರಣ್ಣ ಹಿಳ್ಳಿ, ಗಜೇಂದ್ರ ರೆಡ್ಡಿ ಮತ್ತು ಪುಥಬ್ಬಾ ಸುದ್ದಿಗೋಷ್ಠಿಯಲ್ಲಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.