ADVERTISEMENT

ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ನಾಳೆ ಪ್ರಕಟ

​ಪ್ರಜಾವಾಣಿ ವಾರ್ತೆ
Published 19 ಜುಲೈ 2021, 11:05 IST
Last Updated 19 ಜುಲೈ 2021, 11:05 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಬೆಂಗಳೂರು: 2020–21ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಮಂಗಳವಾರ (ಜುಲೈ 20) ಸಂಜೆ 4 ಗಂಟೆಗೆ ಪ್ರಕಟವಾಗಲಿದೆ.

ಈ ಬಾರಿ ಪರೀಕ್ಷೆ ಇಲ್ಲದೆ, ಎಸ್ಸೆಸ್ಸೆಲ್ಸಿ ಮತ್ತು ಪ್ರಥಮ ಪಿಯುಸಿ ಹಾಗೂ ಶೈಕ್ಷಣಿಕ ಚಟುವಟಿಕೆಗಳಿಗೆ ನೀಡಿದ ಅಂಕಗಳ ಆಧಾರದಲ್ಲಿ ಪಾಸು ಮಾಡಲಾಗುತ್ತದೆ. ಹೀಗಾಗಿ, ವಿದ್ಯಾರ್ಥಿಗಳ ರ‍್ಯಾಂಕ್‌ ಪಟ್ಟಿ ಘೋಷಿಸುವುದಿಲ್ಲ. ಇಲಾಖೆ ನೀಡಲಿರುವ ಜಾಲತಾಣಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳು ಫಲಿತಾಂಶ ವೀಕ್ಷಿಸಬಹುದು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT