
ಬೆಂಗಳೂರು: ತಮಿಳುನಾಡು, ಪುದುಚೇರಿ ಮತ್ತು ಆಂಧ್ರಪ್ರದೇಶದ ಕರಾವಳಿ ಪಕ್ಕದ ಪ್ರದೇಶಗಳಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ರಾಜ್ಯದ ಹಲವೆಡೆ ಬುಧವಾರ ಸಾಧಾರಣ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ತಾಪಮಾನದಲ್ಲಿ ಇಳಿಕೆ ಹಾಗೂ ಶೀತಗಾಳಿ ಬೀಸುತ್ತಿರುವ ಪರಿಣಾಮ ಚಳಿ ಮುಂದುವರಿದಿದೆ. ಬೆಂಗಳೂರು ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣ ಇದ್ದು, ಮಳೆಯಾಗಲಿದೆ. ಕೆಲ ಪ್ರದೇಶಗಳಲ್ಲಿ ಬೆಳಗಿನ ಜಾವ ಮಂಜು ಬೀಳುವ ಸಾಧ್ಯತೆ ಇದೆ.
ಉತ್ತರ ಕನ್ನಡ, ಬಳ್ಳಾರಿ, ದಾವಣಗೆರೆ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಕೊಡಗು, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನದಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಬಗ್ಗೆ ಮುನ್ಸೂಚನೆ ನೀಡಿರುವ ಇಲಾಖೆ, ‘ಯೆಲ್ಲೊ ಅಲರ್ಟ್’ ಘೋಷಿಸಿದೆ.
ಬೆಂಗಳೂರಿನಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 24 ಡಿಗ್ರಿ ಸೆಲ್ಸಿಯಸ್ ಮತ್ತು 18 ಡಿಗ್ರಿ ಸೆಲ್ಸಿಯಸ್ ಇರಲಿದೆ. ಉತ್ತರ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ .
ಕಳೆದ 24 ಗಂಟೆಯಲ್ಲಿ ಚಿಂತಾಮಣಿಯಲ್ಲಿ ಗರಿಷ್ಠ 22.2 ಡಿಗ್ರಿ ಸೆಲ್ಸಿಯಸ್ ಇದ್ದರೆ, ಕನಿಷ್ಠ 18.6 ಡಿಗ್ರಿ ಸೆಲ್ಸಿಯಸ್‌ಗೆ ಇಳಿದಿದೆ. ಮಂಡ್ಯದಲ್ಲಿ ಗರಿಷ್ಠ 26.5 ಡಿಗ್ರಿ ಸೆಲ್ಸಿಯಸ್ ಇದ್ದರೆ, ಕನಿಷ್ಠ 17.3 ಡಿಗ್ರಿ ಸೆಲ್ಸಿಯಸ್‌ಗೆ ಕುಸಿದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.