ADVERTISEMENT

Karnataka Rains: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂದುವರಿಯಲಿರುವ ಭಾರಿ ಮಳೆ

​ಪ್ರಜಾವಾಣಿ ವಾರ್ತೆ
Published 28 ಜೂನ್ 2024, 15:38 IST
Last Updated 28 ಜೂನ್ 2024, 15:38 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ‘ರೆಡ್‌ ಅಲರ್ಟ್‌’ ಘೋಷಿಸಲಾಗಿದ್ದು, ಉತ್ತರ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ‘ಆರೆಂಜ್‌ ಅಲರ್ಟ್‌’ ಹಾಗೂ ಬೆಳಗಾವಿ, ಹಾವೇರಿ, ಧಾರವಾಡ, ಹಾಸನ, ಮೈಸೂರು ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್‌’ ಘೋಷಿಸಲಾಗಿದೆ.

ADVERTISEMENT

ಈ ಜಿಲ್ಲೆಗಳಲ್ಲಿ ಮಳೆಯೊಂದಿಗೆ ಗಂಟೆಗೆ 45–50 ಕಿಲೋಮೀಟರ್‌ ವೇಗದಲ್ಲಿ ನಿರಂತರ ಗಾಳಿ ಬೀಸಲಿದೆ. ರಾಯಚೂರು, ಯಾದಗಿರಿ, ಬೀದರ್‌, ಕಲಬುರ್ಗಿ, ಗದಗ, ಚಿಕ್ಕಬಳ್ಳಾಪುರ, ಬೆಂಗಳೂರು, ದಾವಣಗೆರೆ, ಕೋಲಾರ, ಮಂಡ್ಯ, ತುಮಕೂರು ಜಿಲ್ಲೆಯಲ್ಲೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.