ADVERTISEMENT

7 ಜಿಲ್ಲೆಗಳಲ್ಲಿ ‘ಆರೆಂಜ್ ಅಲರ್ಟ್’ ಘೋಷಣೆ

​ಪ್ರಜಾವಾಣಿ ವಾರ್ತೆ
Published 10 ಆಗಸ್ಟ್ 2020, 20:26 IST
Last Updated 10 ಆಗಸ್ಟ್ 2020, 20:26 IST
ಬೆಂಗಳೂರಿನಲ್ಲಿ ಮಳೆ (ಸಂಗ್ರಹ ಚಿತ್ರ)
ಬೆಂಗಳೂರಿನಲ್ಲಿ ಮಳೆ (ಸಂಗ್ರಹ ಚಿತ್ರ)   

ಬೆಂಗಳೂರು: ‘ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿರುವುದರಿಂದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಆ.11ರಂದು ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ’ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ ತಿಳಿಸಿದರು.

‘ಬಾಗಲಕೋಟೆ, ಕಲಬುರ್ಗಿ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ.

‘ಐದು ದಿನಗಳಿಂದ ಕರಾವಳಿ ಹಾಗೂ ಒಳನಾಡಿನಾದ್ಯಂತ ಧಾರಾಕಾರ ಮಳೆಯಾಗಿದೆ. ಮುಂದಿನ ಎರಡು ದಿನಗಳಲ್ಲಿ ಹೆಚ್ಚು ಮಳೆಯಾಗಬಹುದು. ಆ.13ರಿಂದ ಮಳೆ ಪ್ರಮಾಣ ತಗ್ಗುವ ಸಾಧ್ಯತೆ ಇದೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.