ADVERTISEMENT

ಹೆಸರಘಟ್ಟ: ಐಐಎಚ್ಆರ್‌ನಲ್ಲಿ ಕರ್ನಾಟಕ ರಾಜ್ಯೋತ್ಸವ

​ಪ್ರಜಾವಾಣಿ ವಾರ್ತೆ
Published 17 ನವೆಂಬರ್ 2023, 16:21 IST
Last Updated 17 ನವೆಂಬರ್ 2023, 16:21 IST
ಸಂಗೀತ ನಿರ್ದೇಶಕ ವಿ. ಮನೋಹರ್ ಅವರಿಗೆ 'ಕನ್ನಡ ಕಂಪು' ಪ್ರಶಸ್ತಿ ಪ್ರದಾನ ಮಾಡಲಾಯಿತು
ಸಂಗೀತ ನಿರ್ದೇಶಕ ವಿ. ಮನೋಹರ್ ಅವರಿಗೆ 'ಕನ್ನಡ ಕಂಪು' ಪ್ರಶಸ್ತಿ ಪ್ರದಾನ ಮಾಡಲಾಯಿತು   

ಹೆಸರಘಟ್ಟ: ಇಲ್ಲಿನ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯಲ್ಲಿ (ಐಐಎಚ್ಆರ್) ಕನ್ನಡ ಕ್ರಿಯಾ ಸಮಿತಿ ವತಿಯಿಂದ ಕರ್ನಾಟಕ ರಾಜ್ಯೋತ್ಸವ ಆಚರಿಸಲಾಯಿತು.

ಸಮಾರಂಭದಲ್ಲಿ ಸಂಗೀತ ನಿರ್ದೇಶಕ ವಿ. ಮನೋಹರ್ ಅವರಿಗೆ ‘ಕನ್ನಡ ಕಂಪು’ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕನ್ನಡ ಭಾಷೆಯಲ್ಲಿ ಅತ್ಯುತ್ತಮ ಅಂಕ ಗಳಿಸಿದ ಪಿಯುಸಿ ಮತ್ತು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

ಸಂಸ್ಥೆಯ ಪ್ರಭಾರ ನಿರ್ದೇಶಕ ಪ್ರಕಾಶ್ ಪಾಟೀಲ್, ಕನ್ನಡ ಕ್ರಿಯಾ ಸಮಿತಿ ಅಧ್ಯಕ್ಷ ವಿ.ಎಚ್.ಎಲ್. ಲಕ್ಷ್ಮಣ್, ಉಪಾಧ್ಯಕ್ಷ ಪಿ ನಂದೀಶ್, ಕಾರ್ಯದರ್ಶಿ ಎನ್. ಲೋಕೇಶ್, ಉಪ ಕಾರ್ಯದರ್ಶಿ ಓಂಕಾರ್ ನಾಯಕ್ ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.