ಬೆಂಗಳೂರು: ‘ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಕಲ್ಪಿಸಲು ರಚಿಸಿರುವ ನಿವೃತ್ತ ನ್ಯಾ.ಎ.ಜೆ. ಸದಾಶಿವ ಆಯೋಗದ ವರದಿ ಜಾರಿಗೆ ಸಂಬಂಧಿಸಿದಂತೆ ಸಚಿವ ಕೆ.ಎಚ್. ಮುನಿಯಪ್ಪ ನೀಡಿರುವ ಹೇಳಿಕೆ ಖಂಡನೀಯ. ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು’ ಎಂದು ಕರ್ನಾಟಕ ಮೀಸಲಾತಿ ಸಂರಕ್ಷಣಾ ಒಕ್ಕೂಟ ಆಗ್ರಹಿಸಿದೆ.
ಗುರುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ರಾಜ್ಯಾಧ್ಯಕ್ಷ ಕಿರಣ್ ಕೊತ್ತಗೆರೆ, ‘ವರದಿ ಜಾರಿಗೆ ಸಚಿವರು ಹಾಗೂ ಶಾಸಕರ ಮನೆ ಮುಂದೆ ಧರಣಿ ಸತ್ಯಾಗ್ರಹ ಹಾಗೂ ಹೋರಾಟ ನಡೆಸುವಂತೆ ಮುನಿಯಪ್ಪ ಅವರು ಸ್ವಜಾತಿಯವರಿಗೆ ಕರೆ ನೀಡಿದ್ದಾರೆ. ಈ ವರದಿ ಪರಿಶಿಷ್ಟ ಸಮುದಾಯದ ಒಗ್ಗಟ್ಟನ್ನು ಛಿದ್ರಗೊಳಿಸಲಿದೆ. ಮುನಿಯಪ್ಪ ಅವರು ಸ್ವಪಕ್ಷೀಯ ಸಚಿವರು ಹಾಗೂ ಶಾಸಕರ ವಿರುದ್ಧ ಜನಾಂಗವನ್ನು ಎತ್ತಿ ಕಟ್ಟುವ ಪಿತೂರಿ ನಡೆಸುತ್ತಿರುವುದು ರಾಜಕೀಯ ದ್ರೋಹ. ಆದ್ದರಿಂದ ಇವರನ್ನು ವಜಾ ಮಾಡಬೇಕು’ ಎಂದು ಒತ್ತಾಯಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.