ADVERTISEMENT

ಕೆಆರ್‌ಐಡಿಎಲ್‌ ಕಾಮಗಾರಿಗೆ ವಿನಾಯಿತಿ: ಆದೇಶಕ್ಕೆ ತಡೆ

​ಪ್ರಜಾವಾಣಿ ವಾರ್ತೆ
Published 12 ಮಾರ್ಚ್ 2020, 22:33 IST
Last Updated 12 ಮಾರ್ಚ್ 2020, 22:33 IST

ಬೆಂಗಳೂರು: ಈ ಕುರಿತಂತೆ ಸಾಮಾಜಿಕ ಕಾರ್ಯಕರ್ತ ಜಿ.ಆರ್.ಅನಿಲ್‌ ಕುಮಾರ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್‌ ಎಸ್‌.ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

ಪ್ರತಿವಾದಿಗಳಾದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಹಣಕಾಸು ಇಲಾಖೆ ಪ್ರಧಾನ ಕಾರ್ಯದರ್ಶಿ, ರಸ್ತೆ ಅಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿ ವಿಚಾರಣೆ ಮುಂದೂಡಲಾಗಿದೆ.

‘ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ–1999ರ ಅಧಿನಿಯಮಕ್ಕೆ ವಿರುದ್ಧವಾಗಿ ವಿನಾಯಿತಿ ನೀಡಲಾಗಿದೆ. ಈ ಕುರಿತು ಹೊರಡಿಸಲಾಗಿರುವ ಅಧಿಸೂಚನೆ ಅಸಾಂವಿಧಾನಿಕ ಮತ್ತು ಕಾನೂನು ಬಾಹಿರ’ ಎಂದು ಅರ್ಜಿದಾರರು ಆರೋಪಿಸಿದ್ದಾರೆ. 2018–19 ಮತ್ತು 2019–20ರಲ್ಲಿ ಸಾಲಿಗೆ ಅನ್ವಯವಾಗುವಂತೆ ಹೊರಡಿಸಲಾದ ಅಧಿಸೂಚನೆಗಳ ಕಾನೂನು ಬದ್ಧತೆಯನ್ನು ಅರ್ಜಿದಾರರು ಪ್ರಶ್ನಿಸಿದ್ದರು. ಅರ್ಜಿದಾರರ ಪರ ವಕೀಲ ಎನ್‌.ಬಯ್ಯಾರೆಡ್ಡಿ ಹಾಜರಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.