ADVERTISEMENT

ಪ. ರಾಮಕೃಷ್ಣಶಾಸ್ತ್ರಿಗೆ ‘ಮನುಶ್ರೀ’ ದತ್ತಿ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 6 ಮೇ 2024, 23:44 IST
Last Updated 6 ಮೇ 2024, 23:44 IST
ಪ.ರಾಮಕೃಷ್ಣ ಶಾಸ್ತ್ರಿ
ಪ.ರಾಮಕೃಷ್ಣ ಶಾಸ್ತ್ರಿ   

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ 2024ರ ‘ಮನುಶ್ರೀ’ ದತ್ತಿ ಪ್ರಶಸ್ತಿಗೆ ಲೇಖಕ ಪ.ರಾಮಕೃಷ್ಣ ಶಾಸ್ತ್ರಿಯವರನ್ನು ಆಯ್ಕೆ ಮಾಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ತೆಂಕಾರಂದೂರಿನ ಪ. ರಾಮಕೃಷ್ಣ ಶಾಸ್ತ್ರಿಯವರು ವೃತ್ತಿಯಲ್ಲಿ ಕೃಷಿಕರು. ಪ್ರವೃತ್ತಿಯಲ್ಲಿ ಸಾಹಿತ್ಯ ಕೃಷಿಕರು. 1964ರಿಂದ ಇಂದಿನವರೆಗೂ ಇವರು 104 ಕೃತಿಗಳನ್ನು ರಚಿಸಿದ್ದಾರೆ. ಕನ್ನಡ ಮತ್ತು ತುಳು ಎರಡೂ ಭಾಷೆಗಳಲ್ಲಿಯೂ ಕಥೆ–ಕಾದಂಬರಿಗಳನ್ನು ರಚಿಸಿದ್ದಾರೆ. ವಿಜ್ಞಾನ, ಅಧ್ಯಾತ್ಮ, ವೈಚಾರಿಕ ಕ್ಷೇತ್ರಗಳಲ್ಲಿಯೂ ಸಾಹಿತ್ಯ ಕೃಷಿ ಮಾಡಿದ್ದಾರೆ. ರಾಜ್ಯದ ವಿವಿಧ ಪತ್ರಿಕೆಗಳಲ್ಲಿ ಇವರ ಲೇಖನಗಳು ಪ್ರಕಟವಾಗಿವೆ‘ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ ಜೋಶಿ ತಿಳಿಸಿದ್ದಾರೆ.

ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಮನೋಹರಿ ಪಾರ್ಥಸಾರಥಿಯವರು ಈ ದತ್ತಿಯನ್ನು ಸ್ಥಾಪಿಸಿದ್ದಾರೆ. ಕನ್ನಡ ಸಾಹಿತ್ಯದಲ್ಲಿ ಮಹತ್ವದ ಸೇವೆ ಸಲ್ಲಿಸಿದ ಬರಹಗಾರಿಗೆ ಈ ಪುರಸ್ಕಾರ ನೀಡಲಾಗುತ್ತದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.