ಬೆಂಗಳೂರು: ಕರ್ನಾಟಕ ಸ್ಪೋರ್ಟ್ಸ್ ಆ್ಯಂಡ್ ಗೇಮ್ಸ್ ಕೋಚ್ಸ್ ಅಸೋಸಿಯೇಷನ್ ನೇತೃತ್ವದಲ್ಲಿ ತರಬೇತುದಾರರು ಹಾಗೂ ತಾಂತ್ರಿಕ ಸಿಬ್ಬಂದಿ ಮೌರ್ಯ ವೃತ್ತದಲ್ಲಿ ಭಾನುವಾರ ಪ್ರತಿಭಟನೆ ನಡೆಸಿದರು.
ಕರ್ನಾಟಕ ಕ್ರೀಡಾ ಪ್ರಾಧಿಕಾರದಲ್ಲಿ 2019-20ನೇ ಸಾಲಿಗೆ ಮಾಸಿಕ ಸಂಚಿತ ಆಧಾರದ ಮೇಲೆ ಆಯ್ಕೆಗೊಂಡಿರುವ ತರಬೇತುದಾರರು ಹಾಗೂ ತಾಂತ್ರಿಕ ಸಿಬ್ಬಂದಿಯ ಕರ್ತವ್ಯದ ಅವಧಿಯನ್ನು ಮುಂದುವರಿಸುವುದು ಹಾಗೂ ವಿವಿಧ ಸೌಲಭ್ಯಗಳನ್ನು ನೀಡುವಂತೆ ಒತ್ತಾಯಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.